Share this news

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ಅಕ್ರಮವಾಗಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗಾಗಿ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.ಇದರಿಂದ ಸಿಎಂಗೆ ಮುಡಾ ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನಾದರೂ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಅರ್ಜಿದಾರರು ಕೇವಿಯೆಟ್ ಸಲ್ಲಿಸಿ ಕೋರಿದ್ದಾರೆ

ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ” ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಸಿಎಂ‌ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.

ಕೇವಿಯಟ್ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ಜಿದಾರ ಪ್ರದೀಪ್ ಕುಮಾರ್, ‘ಕಾನೂನು ಪ್ರಕಾರ ಸಿದ್ದರಾಮಯ್ಯ ಅವರು ಹೈಕೋರ್ಟ್‌ನ ಮೊರೆ ಹೋಗಬಹುದು, ಕೇವಿಯಟ್ ಇಲ್ಲದೇ ಹೋದರೆ ಅವರಿಗೆ ಬಹುತೇಕ ವಿಚಾರಣೆಯಿಂದ ವಿನಾಯಿತಿ ಸಿಗಬಹುದು.ಈ ಹಿನ್ನೆಲೆಯಲ್ಲಿ ನಾನು ಕೇವಿಯಟ್ ಸಲ್ಲಿಸಿದ್ದಾಗಿ ಪ್ರದೀಪ್ ಕುಮಾರ್ ಹೇಳಿದ್ದಾರೆ.
ಈ ನಡುವೆ ಪ್ರಕರಣದ ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಅವರು ಕೂಡ ಸೋಮವಾರ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.

 

                        

                          

                        

                          

 

`

Leave a Reply

Your email address will not be published. Required fields are marked *