ಬೆಂಗಳೂರು: ರಾಜ್ಯಾದ್ಯಂತ 3489 ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ಆಹಾರದ ಸುರಕ್ಷತೆ, ಗುಣಮಟ್ಟ, ನೈರ್ಮಲ್ಯತೆಯ ಕುರಿತಂತೆ ರಾಜ್ಯಾದ್ಯಂತ 1557 ಬೀದಿ ಬದಿ ವ್ಯಾಪಾರ ಘಟಕಗಳನ್ನು ಪರಿವೀಕ್ಷಿಸಲಾಗಿದೆ. ಅವುಗಳಲ್ಲಿ 17 ಮಾದರಿಗಳು ಅಸುರಕ್ಷಿತ, 18 ಮಾದರಿಗಳು ಕಳೆಗುಣಮಟ್ಟದಿಂದ ಕೂಡಿವೆ ಎಂದು ವರದಿ ಬಂದಿದೆ.ಲೋಪಗಳು ಕಂಡು ಬಂದಿರುವ 406 ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಮತ್ತು ನಿಯಮ ಉಲ್ಲಂಘಿಸಿದವರ ವಿರುದ್ಧ 44,500 ರೂ. ದಂಡ ವಿಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 1240 ಬಿದಿ ಬದಿ ಆಹಾರ ವ್ಯಾಪಾರಿಗಳಿಗೆ ನೈರ್ಮಲ್ಯತೆ ಮತ್ತು ಗುಣಮಟ್ಟ ಕುರಿತ ತರಬೇತಿಯನ್ನು ನೀಡಲಾಗಿದೆ. 866 ಬೀದಿಬದಿಯ ವ್ಯಾಪಾರ ಘಟಕಗಳಿಗೆ ಉಚಿತ ನೋಂದಣಿ ಮಾಡಲಾಗಿದೆ. ರಾಜ್ಯಾದ್ಯಂತ 186 ಬಸ್ ನಿಲ್ದಾಣಗಳಲ್ಲಿನ 889 ಆಹಾರ ಮಳಿಗೆಗಳಿಗೆ ಪರಿಶೀಲನೆ ಮಾಡಲಾಗಿದೆ. ಲೋಪಗಳು ಕಂಡು ಬಂದಿರುವ 206 ಘಟಕಗಳಿಗೆ ನೋಟಿಸ್‌ಗಳನ್ನು ಜಾರಿ ಮಾಡಿ 55 ಸಾವಿರ ರೂ. ದಂಡ ಹಾಕಲಾಗಿದೆ. 99 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದೆ ಎಂದರು.
ರಾಜ್ಯಾದ್ಯಂತ 603 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, 545 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಟ್ಟು 1263 ಅಂಗನವಾಡಿ ಕೇಂದ್ರಗಳಿಗೆ ಉಚಿತ ನೊಂದಣಿ ಮಾಡಲಾಗಿದೆ. ರಾಜ್ಯಾದ್ಯಂತ 736 ಹೋಟೆಲ್/ರೆಸ್ಟೋರೆಂಟ್ ಗಳಿಗೆ ಪರಿಶೀಲಿಸಲಾಗಿದೆ. ಲೋಪಗಳು ಕಂಡು ಬಂದಿರುವ 190 ಘಟಕಗಳಿಗೆ ನೋಟಿಸ್ ಜಾರಿ ಮಾಡಿ 21500 ರೂ. ದಂಡ ಹಾಕಲಾಗಿದೆ ಎಂದು ತಿಳಿಸಿದರು.
291 ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ High Risk ಆಹಾರ ಉದ್ದಿಮೆಗಳ ವರ್ಗದಡಿ ಬರುವ 1685 ಆಹಾರ ಉದ್ದಿಮೆಗಳನ್ನು ತಪಾಸಣೆ ಮಾಡಲಾಗಿದೆ. ಲೋಪ ಕಂಡುಬಂದಿರುವ 465 ಉದ್ದಿಮೆಗಳಿಗೆ ನೋಟಿಸ್ ನೀಡಲಾಗಿದೆ. 175 ಹಾಲಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 73 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣ ಆಗಿದೆ. 4 ಮಾದರಿಗಳು ಕಳೆಗುಣಮಟ್ಟದ ಎಂದು, 69 ಮಾದರಿಗಳು ಸುರಕ್ಷಿತ ಎಂದು ವರದಿ ಬಂದಿದೆ ರಂದರು. ಇನ್ನೂ ಹೆಚ್ಚಿನ ಹಾಲಿನ ಮಾದರಿಗಳ ಸಂಗ್ರಹಣೆ ಮತ್ತು ವಿಶ್ಲೇಷಣೆಗಾಗಿ ಆಗಸ್ಟ್ ನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ
ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ(ASU) ಔಷಧಗಳ ಅಮಲು ಜಾರಿ ವಿಭಾಗ ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಆಯುಷ್ ಔಷಧಗಳ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷದ ಆಡಳಿತ (FDA) ಇಲಾಖೆಯ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ವಿಲೀನಗೊಳಿಸಲಾಗಿದೆ. ಇದರಿಂದ ಆರೋಗ್ಯ ಇಲಾಖೆಯಲ್ಲಿನ ಎಲ್ಲ ನಿಯಂತ್ರಣ ಕಾರ್ಯಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅನುಕೂಲ ಆಗುತ್ತದೆ ಎಂದು ಹೇಳಿದರು.
ಇಲಾಖೆಯಿಂದ ನೀಡುತ್ತಿರುವ ಆನ್‌ಲೈನ್ ಸೇವೆಯನ್ನು ONDLS Portal ಗೆ Migrate ಆಗಿರುವುದರಿಂದ ರಕ್ತ ನಿಧಿ ಕೇಂದ್ರಗಳಿಗೆ ಆನ್‌ಲೈನ್ ಮೂಲಕವೇ ಪರವಾನಿಗೆಗಳನ್ನು ನೀಡಲಾಗುತ್ತಿದೆ. ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಗಳಲ್ಲಿ ಅಗತ್ಯ ಮಾದಕ ಔಷಧಗಳನ್ನು ಬಳಸಲು ಇಲಾಖೆಯಿಂದ RMI Certificate ನೀಡಲಾಗುತ್ತಿದೆ. ಅದನ್ನು ಆನ್‌ಲೈನ್ ಮೂಲಕವೇ ಒದಗಿಸಲು ಇಲಾಖೆಯ ಆನ್‌ಲೈನ್ ಸೇಲ್ ವೆಬ್ ಸೈಟ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ. ಅನುತ್ತಮ ಗುಣಮಟ್ಟದ ಔಷ
ಧಗಳನ್ನು ಮಾರುಕಟ್ಟೆಯಿಂದ 30 ದಿನಗಳಲ್ಲಿ ಹಿಂಪಡೆಯಲಾಗುತ್ತಿದ್ದುದನ್ನು ಎರಡು ದಿನಗಳ ಅವಧಿಗೆ ಇಳಿಸಲಾಗಿದೆ ಎಂದರು.