ಚಿಕ್ಕಬಳ್ಳಾಪುರ:ಬಿಜೆಪಿಯ ಡಾ.ಕೆ ಸುಧಾಕರ್ ಒಂದೇ ಒಂದು ಮತದಿಂದ ಗೆದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಗೆದ್ದ ಬಳಿಕ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಸುಧಾಕರ್ ಗೆಲುವಿನಿಂದ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಈ ವರದಿಯನ್ನು ತಳ್ಳಿಹಾಕಿದ್ದಾರೆ.
ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದ ಈಶ್ವರ್, ಸುಧಾಕರ್ ಅವರು ತಮ್ಮ ಕ್ಷೇತ್ರದಲ್ಲಿ ಒಂದು ಮತದ ಮುನ್ನಡೆ ಸಾಧಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೆ, ಸುಧಾಕರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೂ ಪ್ರದೀಪ್ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.ಜತೆಗೆ ಬಿಜೆಪಿ ನಾಯಕರು ಕೂಡ ಈಶ್ವರ್ ಅವರ ರಾಜೀನಾಮೆಗೆ ಒತ್ತಾಯಿಸಿದರು.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರದೀಪ್ ಈಶ್ವರ್ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರದೀಪ್ ಈಶ್ವರ್ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.