
ಮಂಗಳೂರು (ಅ.31): ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ.01ರಂದು ನಡೆದಿದ್ದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನುವ ಸ್ಫೋಟಕ ಸತ್ಯ ಬಹಿರಂಗಗೊಂಡಿದೆ.
ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ ಎಂದು ಎನ್ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ಎನ್‌ಐಎ ತನಿಖೆಯಿಂದ ಸುಹಾಸ್ ಶೆಟ್ಟಿ ಸುಹಾಸ್ ಶೆಟ್ಟಿಯ ಚಟುವಟಿಕೆಗಳ ಮೇಲೆ ಹಲವಾರು ತಿಂಗಳ ಕಾಲ ಕಣ್ಣಿಟ್ಟಿದ್ದ ತಂಡ ಭಾರಿ ಪ್ಲಾನ್ ಮಾಡಿತ್ತು. ಸುಹಾಸ್ ಶೆಟ್ಟಿ ಹತ್ಯೆ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು, ತಪ್ಪಿಸಿಕೊಂಡರೆ ಏನು? ಪ್ರತಿದಾಳಿಯಾದರೆ ಹೇಗೆ? ಎಲ್ಲವೂ ಮೊದಲೇ ಪ್ಲಾನ್ ಮಾಡಲಾಗಿತ್ತು. ಹತ್ಯೆಯ ದಿನ ಆರೋಪಿಗಳಿಂದ ಎರಡು ಕಾರುಗಳು ಬಳಕೆ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.




