ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.