Share this news

ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್​ ರಜಾಕ್ ಪ್ರಮುಖ ಆರೋಪಿ ಮುಜಾಮಿಲ್‌ನ ತಂದೆಯಾಗಿದ್ದಾನೆ. ಈ ಕೊಲೆಗೆ ಮೂರು ತಿಂಗಳ ಮುಂಚೆಯೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

 

 

 

 

Leave a Reply

Your email address will not be published. Required fields are marked *