Share this news


ಕಾರ್ಕಳ: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಿದಾಗ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯವೆಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಯಡಿ 156 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು. ಪ್ರದಾನಿ ನರೇಂದ್ರ ಮೋದಿಯ ಯೋಜನೆಯಾದ ವಿಶ್ವಕರ್ಮ ಯೋಜನೆಯ ಮೂಲಕ 160 ವಿವಿಧ ಸ್ವಯಂ ಉದ್ಯೋಗ ಮಾಡುತ್ತಿರುವ ವೃತ್ತಿಪರರು ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಆರಂಭಿಕ ಹಂತದಲ್ಲಿ ಕನಿಷ್ಟ ಶೇ5ರ ಬಡ್ಡಿದರದಲ್ಲಿ 1 ಲಕ್ಷ ರೂ ಸಾಲ ಸಾಲಭ್ಯವನ್ನು 18 ತಿಂಗಳ ಮರುಪಾವತಿ ಕಂತುಗಳಲ್ಲಿ ನೀಡಲಾಗುತ್ತದೆ ಬಳಿಕ ಸಾಲ ಯಶಸ್ವಿ ಮರುಪಾವತಿಯಾದಲ್ಲಿ ಶೇ 5ರ ಬಡ್ಡಿದರದಲ್ಲಿ ಗರಿಷ್ಟ 3 ಲಕ್ಷದವರೆಗೆ ಸಾಲಸೌಲಭ್ಯ ಸಿಗಲಿದೆ ಎಂದರು.ಆದ್ದರಿAದ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ದುರ್ಬಳಕೆ ಮಾಡದೇ ಸದುಪಯೋಗಪಡಿಸಿಕೊಳ್ಳಬೇಕೆಂದರು
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯ ಉಪ ನಿರ್ದೇಶಕ ವಾಮನ್ ನಾಯಕ್ ಹಾಗೂ ಕಾರ್ಕಳ ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಹರೀಶ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *