ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಭೂಮಿಗೆ ಮರಳಿದ್ದಾರೆ. ಅವರು ಫ್ಲೋರಿಡಾ ಕರಾವಳಿಯಲ್ಲಿ ಯಶಸ್ವಿಯಾಗಿ ಇಳಿದಿದ್ದಾರೆ. ಅವರನ್ನು ಕ್ಯಾಪ್ಸುಲ್‌ನಿಂದ ಹೊರತೆಗೆದು ಸ್ಟ್ರೆಚರ್ ಮೇಲೆ ಮೇಲೆ ಮಲಗಿಸಿ ಕರೆದೊಯ್ಯಲಾಯಿತು.
ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು.
ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು.
ಹಾಗಾಗಿ, ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.
K