ಬೆಂಗಳೂರು, ಸೆಪ್ಟೆಂಬರ್ 19: ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರು ಈ ಹಿಂದೆ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿದ್ದು, ಅವರಿಂದ ದಸರಾ ಉದ್ಘಾಟನೆ ಮಾಡಿಸಬಾರದು ಎಂದು ಆಗ್ರಹಿಸಿ ಸುಪ್ರೀಂಕೋರ್ಟ್‌ಗೆ ಸರ್ಜಿ ಸಲ್ಲಿಸಲಾಗಿತ್ತು.
ದೂರುದಾರರು, ದಸರಾ ಉದ್ಘಾಟನೆಯಂತಹ ಧಾರ್ಮಿಕ ಸಮಾರಂಭವನ್ನು ಅನ್ಯ ಧರ್ಮದ ವ್ಯಕ್ತಿ ಉದ್ಘಾಟಿಸುವುದು ಸೂಕ್ತವಲ್ಲ ಎಂದು ವಾದಿಸಿದರು. ಇದೊಂದು ರಾಜಕೀಯ ಉದ್ದೇಶದಿಂದ ಮಾಡಿದ ಕ್ರಮ ಎಂದು ಅರ್ಜಿದಾರರು ಆರೋಪಿಸಿದರು.ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು. ಉಭಯ ವಾದ ಆಲಿಸಿದ ನಂತರ, ನ್ಯಾಯಪೀಠವು ದೂರುದಾರರ ಅರ್ಜಿಯನ್ನು ವಜಾಗೊಳಿಸಿತು.
ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು. ಬಾನು ಮುಸ್ತಾಖ್ ಅವರಿಗೆ ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲ. ಅವರು ಹಿಂದೂ ವಿರೋಧಿಯಾಗಿದ್ದು, ಭುವನೇಶ್ವರಿಯನ್ನು ಅಪಮಾನ ಮಾಡಿದ್ದಾರೆ. ಬಾನು ಮುಷ್ತಾಕ್ ಆ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚಿಸಿದರೆ, ಅವರು ಸೆಪ್ಟೆಂಬರ್ 22 ರಂದು ದಸರಾ ಉದ್ಘಾಟನೆಗೆ ನಮ್ಮ ಅಭ್ಯಂತರವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.