

ನವದೆಹಲಿ, ಅ.05: ಉಳಿದ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಪಡೆಯದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮತ್ತು ಆರೋಪಗಳ ಕುರಿತು ವಿವರಣೆ ನೀಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಬಹು-ಸದಸ್ಯರನ್ನೊಳಗೊಂಡ ಚುನಾವಣಾ ಆಯೋಗಕ್ಕೆ ಸಾಂವಿಧಾನಿಕವಾಗಿ ನೀಡಲಾದ ಅಧಿಕಾರಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ಚಲಾಯಿಸಬಹುದೇ ಎಂಬುದನ್ನು ನಿರ್ಧರಿಸುವ ಮೊದಲು, ಆಯೋಗದ ಪ್ರತಿಕ್ರಿಯೆ ಅಗತ್ಯವಿದೆ ಮತ್ತು ಕೇವಲ ಚುನಾವಣಾ ಆಯೋಗದಲ್ಲಿ ಸಾಂಸ್ಥಿಕ ಬಿಕ್ಕಟ್ಟು ಇದೆ ಎಂಬ ಪತ್ರಿಕಾ ವರದಿಯ ಆಧಾರದ ಮೇಲೆ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಚುನಾವಣಾ ಆಯೋಗವು ನೋಟಿಸ್‌ಗೆ ಉತ್ತರಿಸಿದ ಬಳಿಕ, ಅಗತ್ಯವಿರುವ ಸರ್ವಾನುಮತವಿಲ್ಲದೆ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬುದು ದೃಢಪಟ್ಟರೆ ಅಂತಹ ಆದೇಶಗಳನ್ನು ಮರುಪರಿಶೀಲಿಸಲಾಗುವುದು ಅಥವಾ ರದ್ದುಗೊಳಿಸಲಾಗುವುದು ಎಂದು ಪೀಠ ತಿಳಿಸಿದೆ. ನೋಟಿಸ್ ಜಾರಿಯಾದ ಬಳಿಕ, ಕೆಲವು ನಿರ್ಧಾರಗಳನ್ನು ಸರ್ವಾನುಮತವಿಲ್ಲದೆ ತೆಗೆದುಕೊಳ್ಳಲಾಗಿದೆ ಎಂದು ತೋರಿಸಿದರೆ, ನಾವು ಅಂತಹ ನಿರ್ಧಾರಗಳನ್ನು ಹಿಂಪಡೆಯುತ್ತೇವೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಗೆ ಸಂಬAಧಿಸಿದ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಇತರ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಇಲ್ಲದೆ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಮೂರು ಸದಸ್ಯರ ಪೀಠ ವಿಚಾರಣೆ ನಡೆಸುತ್ತಿದೆ.





.
.
.
.
.
.
.
.
.
.
.
.
.
.
.
.
.
.
.
.
