Share this news

ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದ್ದು, ಮಸೀದಿಯ ಗಾಜು ಪುಡಿ ಪುಡಿಯಾಗಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್​​ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್​​​ ಬಂದೋಬಸ್ತ್​​​​​​​ ಕಲ್ಪಿಸಲಾಗಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಎರಡು ಕೋಮುಗಳ ನಡುವೆ ನಡೆದ ಪೋಸ್ಟ್ ವಾರ್ ಗೆ ಸಂಬಂಧಿಸಿದಂತೆ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ  ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈಗಾಗಲೇ ಎಚ್ಚರಿಕೆಯನ್ನೂ ನೀಡಿದ್ದಾರೆ.

                       in 

                          

                        

                       

Leave a Reply

Your email address will not be published. Required fields are marked *