ಉಡುಪಿ: ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಬಜಗೋಳಿ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜೆಡಿಎಸ್ ರಾಜ್ಯ ಘಟಕದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಡಿ.ಜಯರಾಮು ಅವರು ಈ ಆದೇಶ ಹೊರಡಿಸಿದ್ದಾರೆ. ಸುರೇಶ್ ದೇವಾಡಿಗ ಕಾರ್ಕಳದ ಬಜಗೋಳಿಯವರಾಗಿದ್ದು ಕಳೆದ ಹಲವು ವರ್ಷಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಘಟಕದಲ್ಲಿ ಸಕ್ರೀಯರಾಗಿದ್ದಾರೆ.