ವಿಜಯನಗರ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು,ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ವಿಜಯನಗರದ ಹೊಸಪೇಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆರೋಪಿಯ ಬಗ್ಗೆ ಮಾಹಿತಿಗಳು ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂದಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೇವೆ.ಸಿಸಿಬಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ಕೈಗೊಳ್ಳುತ್ತಾರೆ ಆದ್ದರಿಂದ ಸಿಸಿಬಿಗೆ ವಹಿಸಿದ್ದೇವೆ. FSL ವರದಿ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಸಿಎಂ ತಿಳಿಸಿದರು.