
ಬೆಂಗಳೂರು , ಡಿ.04: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ತೀವೃಗೊಳಿಸಿದ್ದು, ಇದೀಗ ಈ ಬ್ಲಾಸ್ಟ್ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೂ ಲಿಂಕ್ ಇದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್ಐಎ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆಯನ್ನು ನಡೆಸುತ್ತಿದೆ.
ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರು ಹಾಗೂ ರೌಡಿಶೀಟರ್ಗಳು ಮೊಬೈಲ್ ಉಪಯೋಗಿಸುತ್ತಿದ್ದರು ಎಂಬ ವಿಡಿಯೋ ವೈರಲ್ ಆಗಿತ್ತು. ಜುಹಾದ್ ಹಮೀದ್ ಶಕೀಲ್ ಮನ್ನಾ ಕೈಯಲ್ಲಿ ಮೊಬೈಲ್ ಇರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರು ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಈ ತನಿಖೆಯ ಸ್ವಲ್ಪ ಸಮಯದ ನಂತರ ದೆಹಲಿಯಲ್ಲಿ ಕಾರು ಬ್ಲಾಸ್ಟ್ ಆಗಿದೆ. ಇದೀಗ ಬೆಂಗಳೂರು ಜೈಲಿನಲ್ಲಿರುವ ಉಗ್ರನಿಗೂ ದೆಹಲಿ ಬ್ಲಾಸ್ಟ್ಗೂ ಸಂಬಂಧ ಇರಬಹುದು ಎಂಬ ಅನುಮಾನ ಶುರುವಾಗಿದೆ. ಈ ಬ್ಲಾಸ್ಟ್ಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೂ ಲಿಂಕ್ ಇದೆಯಾ ಎಂಬ ಅನುಮಾನುಗಳು ಹುಟ್ಟಿಕೊಂಡಿದೆ. ಈ ಕಾರಣಕ್ಕೆ ಎನ್ಐಎ ಇದೀಗ ಮತ್ತೊಮ್ಮೆ ಜೈಲಿಗೆ ಭೇಟಿ ನೀಡಿದೆ. ಈ ಉಗ್ರ ಜೈಲಿನಲ್ಲಿದ್ದುಕೊಂಡು ಯಾರನ್ನೆಲ್ಲ ಸಂಪರ್ಕಿಸಿದ್ದಾನೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ.ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಸಿಗುತ್ತಿದೆ ಎಂಬ ಆರೋಪ ಕೂಡ ಬಂದಿತ್ತು. ಈ ಬೆನ್ನಲ್ಲೇ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸಿರುವ ವಿಡಿಯೋ ವೈರಲ್ ಆಗಿತ್ತು. ಈತ ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ನೇಮಕ ಮಾಡುತ್ತಿದ್ದ ಎಂಬ ಆರೋಪ ಇತ್ತು.
.
.
