Share this news

ಕಾರ್ಕಳ: ಸ್ವದೇಶವೇ ಹೆಚ್ಚು ನಮಗೆ ಪ್ರಾಣಪ್ರಿಯವಾಗಿರುವುದು. ತೃಪ್ತಿಯನ್ನು ಹಾಗೂ ಆನಂದವನ್ನು ಮಾತೃಭೂಮಿ ಮಾತ್ರ ನೀಡಲು ಸಾಧ್ಯ. ಅದೆಷ್ಟೋ ವೀರಸೇನಾನಿಗಳ ತ್ಯಾಗ, ಬಲಿದಾನಗಳಿಗೆ ದೇಶಭಕ್ತಿಯ ಸ್ಪೂರ್ತಿಗೆ ಸ್ವದೇಶ ಮಂತ್ರವೇ ಅಸ್ತçವಾಗಿತ್ತು ಎಂದು ಮೈಸೂರಿನ ವಿವೇಕವಂಶಿ ಫೌಂಡೇಶನ್‌ನ ಸ್ಥಾಪಕರಾದ ನಿತ್ಯಾನಂದ ಎಸ್.ಬಿ ನುಡಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-39ರಲ್ಲಿ ‘ಸ್ವದೇಶಿ ಚಿಂತನೆ- ಯುವಕರಲ್ಲಿ ರಾಷ್ಟç ಭಕ್ತಿಯ ಬೆಳವಣಿಗೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಈಗಿನ ಶಿಕ್ಷಣ ಕೇವಲ ಹೊಟ್ಟೆಪಾಡಿನ ಗುರಿಯಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಶಿಕ್ಷಣ ಕೂಡ ಅತ್ಯಗತ್ಯ. ನಮ್ಮ ಸಮಾಜ ಸುಂದರವಾಗಬೇಕಾದರೆ, ಅದರ ಭವಿಷ್ಯವನ್ನು ನಿರ್ಮಾಣ ಮಾಡುವ ಭಾವಿ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಸಿಗಲೇ ಬೇಕಾದ ನೈತಿಕತೆಯನ್ನು ಈ ಮೌಲ್ಯಸುಧಾದ ಮೂಲಕ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಕೊಡುತ್ತಿರುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲರಾದ ಸಾಹಿತ್ಯ ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕಿ ಕು.ದಿವ್ಯ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *