Share this news

 

 

 

 

ಕಾರ್ಕಳ :ಇಂದಿನ ಡಿಜಿಟಲ್ ಯುಗದಲ್ಲಿ ಫೋಟೋಗ್ರಫಿಯಲ್ಲಿ ಕೂಡ ತಂತ್ರಜ್ಞಾನ ಅಷ್ಟೇ ವೇಗವಾಗಿ ಬೆಳೆಯುತ್ತಿದೆ. ಇದು ಛಾಯಾಗ್ರಾಹಕರಿಗೆ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಫೋಟೋಗ್ರಾಫರ್ ಗಳು ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಉದ್ಯಮಿ ದಿನೇಶ್ ಪೈ ಹೇಳಿದರು.
ಅವರು ಭಾನುವಾರ ಅಜೆಕಾರಿನ ಕೆಮ್ಮಂಜ ಮಲ್ಟಿಪರ್ಪಸ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್’ನ ಕಾರ್ಕಳ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಛಾಯಾಗ್ರಾಹಣ ಎನ್ನುವುದು ಅದ್ಭುತ ಕಲೆ. ಫೋಟೋಗ್ರಫಿಯಲ್ಲಿ ಹೊಸಹೊಸ ತಂತ್ರಜ್ಞಾನ ಬರುತ್ತಿದೆ.ಆದ್ದರಿಂದ ಆಧುನಿಕ ಸವಾಲುಗಳೊಂದಿಗೆ ಬದುಕುವುದನ್ನು ಕಲಿಯುವುದು ಛಾಯಾಗ್ರಾಹಕರಿಗೆ ಅನಿವಾರ್ಯವಾಗಿದೆ. ಛಾಯಾಗ್ರಾಹಕರು ಸಮಾಜದ ಕಣ್ಣಿನಂತೆ ಕಾರ್ಯನಿರ್ವಹಿಸಿ, ಸುತ್ತಮುತ್ತಲಿನ ಎಲ್ಲವನ್ನೂ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದು ಮಾಹಿತಿಯನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಹೊಂದಿದ್ದಾರೆ ಎಂದರು.


ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಕಾರ್ಕಳದ ಎಸ್‌ಕೆಪಿಎ ಅಧ್ಯಕ್ಷ ಪ್ರಮೋದಚಂದ್ರ ಪೈ ಮಾತನಾಡಿ, SKPA ಸಂಘಟನೆಗೆ 30 ವರ್ಷ ಪೂರ್ಣಗೊಂಡಿದೆ. ಪ್ರಸ್ತುತ ಸಂಘಟನೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ.ಈ ಬೃಹತ್‌ ಸಂಘಟನೆ ಕೇವಲ ತನ್ನ ಕಾರ್ಯವ್ಯಾಪ್ತಿಗೆ ಸೀಮಿತಗೊಳಿಸದೇ ಸಮಾಜಮುಖಿ ಚಟುವಟಿಕೆಗಳಲ್ಲಿ ಕೂಡ ತನ್ನನ್ನು ತೊಡಗಿಸಿಕೊಂಡಿದೆ.
ಸಮಾಜದ ಇತರೇ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯ ಶಿಬಿರಗಳು, ಕ್ಯಾಮರಾ ಕಾರ್ಯಾಗಾರಗಳು, ಸದಸ್ಯರಿಗಾಗಿ ಆರೋಗ್ಯ ಜಾಗೃತಿ ಹಾಗೂ ಸಾಕಷ್ಟು ಜನಪರ ಕಾರ್ಯಕ್ರಮಗಳು ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.
SKPA ಸಂಘಟನೆ ತನ್ನದೇ ಹೊಸ ವೆಬ್ ಸೈಟ್ ಲೋಕಾರ್ಪಣೆಯಾಗಿದ್ದು, ಈ ಮೂಲಕ ಸಂಘದ ಸದಸ್ಯರನ್ನು ಸಂಪರ್ಕಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇದಲ್ಲದೇ ಸಂಘ ಬೆಳೆದು ಬಂದ ಸಮಗ್ರ ವಿವರಗಳು ವೆಬ್ ನಲ್ಲಿ ಲಭ್ಯವಿದೆ ಎಂದರು.
ಮುಂದಿನ ದಿನಗಳಲ್ಲಿ ಎಸ್‌ಕೆಪಿಎ ಸಂಘಕ್ಕೆ ಸ್ವಂತ ಕಟ್ಟಡವನ್ನು ಹೊಂದುವ ಸಂಕಲ್ಪವಿದ್ದು, ರಾಜ್ಯಮಟ್ಟದಲ್ಲಿ ಮಾದರಿ ಸಂಘವನ್ನಾಗಿ ರೂಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಹರೀಶ್ ಶೆಟ್ಟಿ,ಎಸ್‌.ಕೆ.ಪಿ.ಎ. ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷ ವಾಸುದೇವ ರಾವ್, ಉದ್ಯಮಿ ಸುಜಯ್ ಶೆಟ್ಟಿ, ಉದ್ಯಮಿ ಶಂಕರ ಶೆಟ್ಟಿ, ಮುನಿಯಾಲು ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರಿಧರ ಪೈ, ಉದ್ಯಮಿ ಶಶಿಕಾಂತ ನಾಯಕ್, ಎಸ್‌.ಕೆ.ಪಿ.ಎ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಕಾರ್ಕಳದ ಎಸ್‌.ಕೆ.ಪಿ.ಎ. ಗೌರವಾಧ್ಯಕ್ಷ ಟಿ.ವಿ. ಸುಶೀಲ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ಹಿರಿಯರಾದ ಗೋಪಾಲ್ ಸುಳ್ಯ ಸೆರಿದಂತೆ ಎಲದಲಾ ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಾಗಿ ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ಕುಕ್ಕುಜೆ, ಉಪಾಧ್ಯಕ್ಷರಾಗಿ ಪ್ರಕಾಶ್ ಪ್ರಭು ಸೇರಿದಂತೆ ಇತರರು ಅಧಿಕಾರ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಸೇರಿದಂತೆ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಪ್ರಶಾಂತ್ ಕೆರ್ವಾಶೆ ಸ್ವಾಗತಿಸಿದರು. ಪ್ರಸಾದ್ ಐಸಿರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿರುವ ಮುನಿಯಾಲಿನ ಕು. ಅಪ್ತಿ ಎಸ್. ಆಚಾರ್ಯ ಅವರಿಂದ ಜಿಮ್ನಾಸ್ಟಿಕ್ ಮಾದರಿಯ ನೃತ್ಯ ಪ್ರದರ್ಶನ ನಡೆಯಿತು.

   

             

     

             

           
   

 

   

             

     

             

       
   

  .      

   

             

     

             

           
   

 

   

             

     

             

       
   

                

   

             

     

             

           
   

 

   

             

     

             

       
   

    

   

             

     

             

           
   

 

   

             

     

             

       
   

  .      

   

             

     

             

           
   

 

   

             

     

             

       
   

                

   

             

     

             

           
   

 

   

             

     

             

       
   

Leave a Reply

Your email address will not be published. Required fields are marked *