
ಕಾರ್ಕಳ,ಫೆ. 23: ಬಂಗ್ಲೆಗುಡ್ಡೆ ಕೆರ್ವಾಶೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ “ಚಿಣ್ಣರ ಕಲರವ ” ಕಾರ್ಯಕ್ರಮವು ಫೆ.21ರಂದು ಜರಗಿತು.
ಕೆರ್ವಾಶೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಹರಿ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಒಂದು ಪ್ರಮುಖ ವೇದಿಕೆಯಾಗಿದೆ ಎಂದರು.
ಶಾಸಕ ವಿ. ಸುನಿಲ್ ಕುಮಾರ್ 2024 -25 ನೇ ಸಾಲಿನ ದಾನಿಗಳ ನಾಮಫಲಕವನ್ನು ಅನಾವರಣ ಗೊಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆರ್ವಾಶೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುನೀತಾ ಪೂಜಾರಿ ವಹಿಸಿ ಶುಭ ಹಾರೈಸಿದರು.
ಕೊಡುಗೈ ದಾನಿ ನಿವೃತ್ತ ಏರ್ ವೈಸ್ ಮಾರ್ಷಲ್ ಮೇಶ್ ಕಾರ್ಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಕ್ಷಣದಲ್ಲಿ ಸಂಸ್ಕಾರ ಅತಿ ಅಗತ್ಯ ಎಂದರು.
ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಮಕ್ಕಳಂತೆ ಹಸ್ತಪ್ರತಿ “ಅಕ್ಷರ ಚಿತ್ತಾರ”ವನ್ನು ಬಿಡುಗಡೆಗೊಳಿಸಿ ಮಕ್ಕಳ ಪ್ರತಿಭೆಯನ್ನು ಕೊಂಡಾಡಿದರು. ವೇದಿಕೆಯಲ್ಲಿ ಜನಪ್ರತಿನಿಧಿ ಧರ್ಮರಾಜ ಹೆಗ್ಡೆ, ಪುಷ್ಪಾ ನಾಯ್ಕ್, ಶಾಲಾ ಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ನಾರಾಯಣ ಗುಡಿಗಾರ್ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸ್ವಾತಿ ವಿ.ನಾಯಕ್, ನಿವೃತ್ತ ಮುಖ್ಯ ಶಿಕ್ಷಕರಾದ ಸಂಜೀವ ದೇವಾಡಿಗ, ಶಾಲಾಭಿಮಾನಿಗಳಾದ ರಾಮಣ್ಣ ಸೇರ್ವೆಗಾರ್ , ಅಶೋಕ್ ಮೈಲಿ, ಲಕ್ಷ್ಮಣ ಪೂಜಾರಿ, ರಾಮರಾಯ ನಾಯಕ್, ಸಂಜೀವ ಗುಡಿಗಾರ್,ಶೇಖರ್ ಶೆಟ್ಟಿ ನಾಗೇಶ್ ನಾಯಕ್, ಜಯರಾಮ್ ಬಂಗೇರ ಉಪಸ್ಥಿತರಿದ್ದು, ಶಾಲಾ ಮಕ್ಕಳಿಗೆ ಹಾಗೂ ಪ್ರತಿಭಾವಂತ ಹಳೆ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ 2024 -25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಗುಡಿಗಾರ್ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಪ್ರಮೀಳಾ ಶೆಟ್ಟಿ ಸ್ವಾಗತಿಸಿ, ಸಹ ಶಿಕ್ಷಕಿ ಸುನೀತಾ ನಾಯಕ್ ನಿರೂಪಿಸಿದರು.ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ರೂಪಾ ಶೆಟ್ಟಿ ವಂದಿಸಿದರು .
ಶಿಕ್ಷಕಿಯರಾದ ಅಶ್ವಿನಿ, ಸೌಮ್ಯ, ಸುಪ್ರೀತಾ ಸಹಕರಿಸಿದರು. . ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ನೃತ್ಯಾವಳಿಗಳು, ಕಿರು ನಾಟಕ ಪ್ರದರ್ಶನಗೊಂಡಿತು.

.
.
.
.
.
.
.
.
.
.
