Share this news

ಕೊಯಂಬತ್ತೂರು: ದೇಶದ ಪ್ರಧಾನಿಯ ರೋಡ್ ಶೋಗೆ ಸೂಕ್ಷ್ಮ ಪ್ರದೇಶ ಅನ್ನೋ ಕಾರಣ ನೀಡಿ ಅನುಮತಿ ನಿರಾಕರಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿತ್ತು. ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಪ್ರಧಾನಿ ಮೋದಿಯ 4 ಕಿಲೋಮೀಟರ್ ರೋಡ್ ಶೋ ಆಯೋಜಿಸಲು ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಆದರೆ ಸೂಕ್ಷ್ಮ ಪ್ರದೇಶದ ಕಾರಣ ನೀಡಿದ ತಮಿಳುನಾಡು ಪೊಲೀಸ್ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿತ್ತು. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಬಿಜೆಪಿಗೆ ಗೆಲುವಾಗಿದೆ. ಪ್ರಧಾನಿ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ. ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ.

ಲೋಕಸಭಾ ಚುನಾವಣೆ ಕಾವೇರುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತ ಪ್ರವಾಸದಲ್ಲಿದ್ದಾರೆ. ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ ದಕ್ಷಿಣ ಭಾರತದ ಪಟ್ಟಣದಲ್ಲೂ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ಆದರೆ ತಮಿಳುನಾಡು ಪೊಲೀಸರು ಮಾತ್ರ ಅನುಮತಿ ನಿರಾಕರಿಸಿದ್ದರು. ಮಾರ್ಚ್ 18 ರ ಮೋದಿ ರೋಡ್ ಶೋ ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದರು.

ಪ್ರಧಾನಿ ಮೋದಿಯ ರೋಡ್ ಶೋ ಸೂಕ್ಷ್ಮ ಪ್ರದೇಶಗಳಲ್ಲಿ ಹಾದು ಹೋಗಲಿದೆ. ಹೀಗಾಗಿ ಇಲ್ಲಿ ರೋಡ್ ಶೋ ನಡೆಸುವುದು ದಂಗೆಗಳಿಗೆ ಕಾರಣವಾಗಬಹುದು. ಇದು ಕೋಮು ಸೂಕ್ಷ್ಮ ಪ್ರದೇಶವಾಗಿದೆ.ಜೊತೆಗೆ ರೋಡ್ ಶೋನಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಅನುಮತಿ ನಿರಾಕರಿಸಿತ್ತು. ಈ ಕುರಿತು ತಮಿಳುನಾಡು ಬಿಜೆಪಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *