Share this news

ಮುಂಬಯಿ: ಟಾಟಾ ಗ್ರೂಪ್ ಮುಖ್ಯಸ್ಥ ಹಾಗೂ ದೇಶದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 11.30 ರ ಸುಮಾರಿಗೆ 86 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬುಧವಾರ ರಾತ್ರಿ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ

ಈ ಕುರಿತು ಟಾಟಾ ಸಮೂಹದ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎನ್ ಚಂದ್ರಶೇಖರನ್ ಮಾಹಿತಿ ನೀಡಿದ್ದು, ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣ ಪುರಸ್ಕೃತರಾದ ರತನ್ ನಾವಲ್ ಟಾಟಾ ಅವರ ನಿಧನ ಅತ್ಯಂತ ದುಃಖಕರ ವಿಷಯವಾಗಿದೆ ಅವರದು ನಿಜಕ್ಕೂ ಅಸಾಧಾರಣ ವ್ಯಕ್ತಿತ್ವ. ಟಾಟಾ ಅವರ ಮರಣದ ನಂತರ, ಮಹಾರಾಷ್ಟ್ರ ಸರ್ಕಾರವು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ 1937ರಲ್ಲಿ ಮುಂಬಯಿನಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.

ಇನ್ನು ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ರತನ್ ನಾವಲ್ ಟಾಟಾ ಅನೇಕ ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು.

ರತನ್ ಟಾಟಾ ಅವರು ಕೈಗಾರಿಕೋದ್ಯಮ, ವ್ಯಾಪಾರ ಸಾಮ್ರಾಜ್ಯದಲ್ಲಿ ತಮ್ಮದೇ ಆದ ವಿಶೇಷ ಗುರುತನ್ನು ಗಳಿಸಿದ್ದವರು. ವ್ಯಾಪಾರದಲ್ಲಿ ಮಾತ್ರವಲ್ಲದೇ ಸಮಾಜ ಸೇವೆ, ಪರೋಪಕಾರಿಯಲ್ಲೂ ರತನ್ ಟಾಟಾ ಅವರಿಗೆ ಸರಿಸಾಟಿ ಯಾರೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಹಳ ದಾನ ಧರ್ಮ ಉದಾರಗಳ ರತನ್ ಟಾಟಾ ನಿಜಕ್ಕೂ ಉದಾತ್ತ ವ್ಯಕ್ತಿಯಾಗಿದ್ದರು.

 

Leave a Reply

Your email address will not be published. Required fields are marked *