

ಕಾರ್ಕಳ, ಸೆ.07:ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅವಶ್ಯಕ ಸಾಧಕನೊಬ್ಬನ ಸಾಧನೆಯ ಹಿಂದಿನ ಗುಟ್ಟು ಶಿಕ್ಷಕನೇ ಆಗಿರುತ್ತಾನೆ. ಅಂತಹ ಪ್ರೇರಣೆಯನ್ನು ಜ್ಞಾನಸುಧಾದ ಮಕ್ಕಳು ಇಂತಹ ಕಾರ್ಯಕ್ರಮದ ಮೂಲಕಪಡೆಯುತ್ತಿರುವುದು ಪ್ರಶಂಸನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಡಿರ್ಪಾಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟಿç ವಿಭಾಗದ ಫ್ರೋಪೆಸರ್ ಹಾಗೂ ಮುಖ್ಯಸ್ಥರಾದ ಡಾ. ಕಲ್ಯಾಣ ಪೆಂಟಪತಿ ನುಡಿದರು.ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ತಾಲೂಕಿನ ಐವರು ನಿವೃತ್ತ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸನ್ಮಾನಿತರಾದ ನಿವೃತ್ತ ಶಿಕ್ಷಕರಾದ ರಾಮಕೃಷ್ಣ ಹೆಬ್ಬಾರ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾಧ ಡಾ. ಸುಧಾಕರ್ ಶೆಟ್ಟಿಯವರು ಮಾತನಾಡಿ, ನಮ್ಮ ಬದುಕಿನಲ್ಲಿ ನಡೆದು ಬಂದ ಹಾದಿಯಲ್ಲಿ ಪ್ರಾಥಮಿಕ ಶಿಕ್ಷಕರ ಪಾತ್ರ ಬಹುದೊಡ್ಡದು. ಅವರ ತ್ಯಾಗ ಮತ್ತು ಸಹನ ಶೀಲತೆ ಎಲ್ಲರಿಗೂ ಮಾದರಿ ಎಂದರು.
ಶಿರ್ಲಾಲು ಎನ್. ಎನ್. ರಾವ್ ಮೆಮೊರಿಯಲ್ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ರಾಮಕೃಷ್ಣ ಹೆಬ್ಬಾರ್, ಎಣ್ಣೆಹೊಳೆ ಸರಕಾರಿ ಪ್ರಾಥಮಿಕ ಶಿಕ್ಷಕಿ ಚಂಪಾ ಡಿ. ಹೆಗ್ಡೆ, ಮಿಯ್ಯಾರು, ಸರಕಾರಿ ಉನ್ನತ್ತಿಕಾರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ, ರೆಂಜಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಅಣ್ಣಿ ಎಮ್. ಹಾಗೂ ಶಿರ್ಲಾಲು ಸೂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ದೈಹಿಕ ಶಿಕ್ಷಕಿ ಶ್ರೀಮತಿ ಶಶಿಕಲಾ ದೇವಿ ಇವರುಗಳನ್ನು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ, ಟ್ರಸ್ಟಿಗಳಾದ ವಿದ್ಯಾವತಿ ಎಸ್. ಶೆಟ್ಟಿ, ಹಾಗೂ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಉಪ ಪ್ರಾಂಶುಪಾಲೆಯಾದ ವಾಣಿ ಕೆ, ಕಾರ್ಕಳ ಜ್ಞಾನಸುಧಾ ಕಾಲೇಜಿನ ಉಪಪ್ರಾಂಶುಪಾಲರಾದ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಬಂಡಿ, ಹಾಗೂ ಹಿರಿಯರಾದ ಸಂಸ್ಥೆಯ ಹಿತೈಷಿ ಅಪ್ರಾಯ ಕಿಣಿ ಉಪಸ್ಥಿತರಿದ್ದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ. ಮತ್ತು ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
=================================
ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ್ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಇಂದಿರಾ ರಾವ್, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಆನಂದ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರ ಪ್ರಶಸ್ತಿ ವಿಜೇತ ಉಪನ್ಯಾಸಕರಾದ
ಸುರೇಶ್ ಮರಕಾಲ ಇವರನ್ನೂ ಸನ್ಮಾನಿಸಲಾಯಿತು. ಸನ್ಮಾನಿತರಾದ ಚಂದ್ರ ನಾಯ್ಕ್ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ
ಮಾತನಾಡಿ ಕಷ್ಟವನ್ನು ಮೀರಿ ನಿಂತಾಗ ಸಾಧನೆ ಸಾಧ್ಯ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪೃವೃತ್ತರಾಗಲಿ ಎಂದು ಶುಭ
ಹಾರೈಸಿದರು . ಸ.ಹಿ.ಪ್ರಾ.ಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ ಮಾತನಾಡಿ ವಿದ್ಯಾರ್ಥಿಗಳು
ಸಂಪಾದನೆಯ ಜೊತೆಗೆ ಮೌಲ್ಯಗಳನ್ನು ಅಳವಡಿಸಿ ಭವಿಷ್ಯದ ಉತ್ತಮ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುರೇಶ್ ಮರಕಾಲ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಾನು
ಬೆಳೆದು ಬಂದ ಹಾದಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು. ತಪ್ಪು ಮಾಡಿದವರನ್ನು ತಿದ್ದುವ ಕಾಯಕಕ್ಕಿಂತ ತಪ್ಪೇ ಮಾಡದ
ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಂಡು ಶಿಕ್ಷಕನಾಗುವ ಘನತೆ ದೊಡ್ಡದು.ಪ್ರತೀ ಸಾಧನೆಯ ಹಿಂದೆ ಗುರುವಿನ
ಪರಿಶ್ರಮವಿದೆ ಎನ್ನುವುದನ್ನು ವಿದ್ಯಾರ್ಥಿಗಳು ಮರೆಯಬಾರದು. ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡುವ ಜ್ಞಾನಸುಧಾದ
ಕಾರ್ಯ ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು.ಅಜೆಕಾರು ಪದ್ಮಗೋಪಾಲ ಎಜ್ಯಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ
ಡಾ.ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ,ಕನ್ನಡ ಉಪನ್ಯಾಸಕಿಯಾದ ಕು.ಮಂಜುಳ ಕಾರ್ಯಕ್ರಮ ನಿರ್ವಹಿಸಿದರು.
ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ,ನವೀನ್ ಎ, ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು
ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
