

ಶಿವಮೊಗ್ಗ: ರಾಜ್ಯ ಸರ್ಕಾರ ಜಾತಿ ಗಣತಿ ಮರು ಸರ್ವೆ ನಡೆಸಲು ಮುಂದಾಗಿದ್ದು ಈ ಬಾರಿ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಗಣತಿ ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುತ್ತಿಲ್ಲ ಎಂದು ಹೇಳಿದರು. ಜಾತಿಗಣತಿಗೆ ಶಿಕ್ಷರನ್ನು ಬಳಸಿಕೊಳ್ಳದೇ ಜಾತಿ ಗಣತಿ ಜವಾಬ್ದಾರಿಯನ್ನು ಹೊರಗುತ್ತಿಗೆಗೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.







