Share this news

ಹೆಬ್ರಿ,ನ.03:ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ‌ ರಸ್ತೆ, ವಿದ್ಯುತ್ ಸಮಸ್ಯೆ, ನಿವೇಶನ ಸಮಸ್ಯೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸಬೇಕೆಂದು ಆಗ್ರಹಿಸಿ ಪ್ರಗತಿಪರ ನಾಗರಿಕರ ವೇದಿಕೆ ಹಾಗೂ ಹೆಬ್ರಿ ತಾಲೂಕು ಹೋರಾಟ ಸಮಿತಿ ವತಿಯಿಂದ ಹೆಬ್ರಿ ತಹಸೀಲ್ದಾರ್ ಅವರಿಗೆ ನ.03 ರಂದು ಮನವಿ ಸಲ್ಲಿಸಲಾಯಿತು.

ಹೆಬ್ರಿ ಗ್ರಾಮೀಣ ಹಾಗೂ ಪೇಟೆಯ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು ವಾಹನ ಸಂಚಾರಕ್ಕೆ ಕಷ್ಟಕರವಾಗಿದೆ,ಮಾತ್ರ ವಿದ್ಯಾರ್ಥಿಗಳು, ಜನಸಾಮಾನ್ಯರು ಧೂಳಿನಲ್ಲಿ ಓಡಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ತುರ್ತು ಸಂದರ್ಭಗಳಲ್ಲಿ ಜನರು ಸಂವಹನಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೇ‌ ಬಡರೋಗಿಗಳಿಗೆ ಸಮಸ್ಯೆಯಾಗಿದ,ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು.ಶೇಡಿಮನೆ, ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಗ್ರಾಮೀಣ ಭಾಗದಲ್ಲಿ ಓಡಾಟಕ್ಕೆ ಸರಿಯಾದ ಬಸ್ ಸೌಕರ್ಯ ಇಲ್ಲದೇ ವಿದ್ಯಾರ್ಥಿಗಳಿಗೆ,ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಆದ್ದರಿಂದ ಈ ಭಾಗದಲ್ಲಿ ಸರ್ಕಾರಿ ಬಸ್ ಓಡಿಸಬೇಕು.
ಇದಲ್ಲದೇ ನಿವೇಶನ ರಹಿತರು ನಿವೇಶನವಿಲ್ಲದೇ ಕಷ್ಟಪಡುತ್ತಿದ್ದು, ಅಕ್ರಮ ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ವಿಲೇವಾರಿ ಮಾಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು.
ರೈತರ ಸಮಸ್ಯೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ,ಮಂಗಗಳ ಹಾವಳಿ, ಆನೆ ದಾಳಿಯಿಂದ ರೈತರು ಕಂಗಾಲಾಗಿದ್ದು ಸರ್ಕಾರ ಈ‌ ನಿಟ್ಟಿನಲ್ಲಿ ಮುತುವರ್ಜಿ ವಹಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ರೈತ ಮುಖಂಡ ಮುಟ್ಲುಪಾಡಿ ಸತೀಶ್ ಶೆಟ್ಟಿ ಸೇರಿದಂತೆ ಹೆಬ್ರಿ ತಾಲೂಕು ಹೋರಾಟ ಸಮಿತಿ ಸದಸ್ಯರು ತಹಶಿಲ್ದಾರ್ ಎ.ಎಸ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು. ಮುಂದಿನ 15 ದಿನಗಳ ಒಳಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಸರ್ಕಾರದ ವಿರುದ್ಧ ಬೃಹತ್ ಮಟ್ಟದ ಕ್ರಾಂತಿಕಾರಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಗತಿಪರ ನಾಗರೀಕರ ವೇದಿಕೆ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಹಾಗೂ ಹೆಬ್ರಿ ತಾಲೂಕು ಹೋರಾಟ ಸಮಿತಿಯ ಮುಖಂಡರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಭಾಸ್ಕರ ಜೋಯಿಸ್, ಹರೀಶ್ ಪೂಜಾರಿ,ನಾರಾಯಣ ನಾಯ್ಕ್,ವಿಜೇಂದ್ರ ಶೆಟ್ಟಿ,ಕನ್ನಡಪರ ಹೋರಾಟಗಾರ ಅಣ್ಣಪ್ಪ ಕುಲಾಲ್,ಶ್ರೀಕಾಂತ್ ಪೂಜಾರಿ ಕುಚ್ಚೂರು,ನ್ಯಾಯವಾದಿ ಕೃಷ್ಣ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *