ಕಾರ್ಕಳ: ಎಸ್ ಕೆ ಬಾರ್ಡರ್ ಸಮೀಪದ ಮಾಳ ಘಾಟಿಯಲ್ಲಿ ಟೆಂಪೋ ಟ್ರಾವೆಲ್ಲರ್ (ಟಿ.ಟಿ) ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಅಗ್ನಿಗಾಹುತಿಯಾದ ಘಟನೆ ಶನಿವಾರ ಸಂಭವಿಸಿದೆ.
ಉಡುಪಿಯಿಂದ ಕಾರ್ಕಳ ಮಾರ್ಗವಾಗಿ ಮಾಳ ಘಾಟಿ ರಸ್ತೆಯಲ್ಲಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಟೂರಿಸ್ಟ್ ವಾಹನದಲ್ಲಿ ಏಕಾಎಕಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ವಾಹನದಲ್ಲಿದ್ದ 11 ಮಂದಿ ಪ್ರಯಾಣಿಕರು ಕೆಳಗಿಳಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ವಾಹನವನ್ನು ವ್ಯಾಪಿಸಿದೆ. ಕೇವಲ ಅರ್ಧ ತಾಸಿನಲ್ಲೇ ಬೆಂಕಿ ವಾಹನವನ್ನು ವ್ಯಾಪಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರೂ ವಾಹನ ಸುಟ್ಟು ಕರಕಲಾಗಿದೆ. ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.