ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ವಾದಮಂಡಿಸಿದ್ದಾರೆ. ದೂರುದಾರರ ಪರ ವಾದವನ್ನು ಆಲಿಸಿದ ಹೈಕೋರ್ಟ್ ಬಳಿಕ ವಿಚಾರಣೆಯನ್ನು ಸೋಮವಾರ (ಸೆಪ್ಟೆಂಬರ್ 2) ದಂದು ಮುಂದೂಡಿದೆ. ಇನ್ನು ಈ ವೇಳೆ ಹಿರಿಯ ವಕೀಲ ಕೆ.ಜಿ.ರಾಘವನ್ರಿಂದ ವಾದಮಂಡನೆಗೆ ಅವಕಾಶ ಕೋರಲಾಗಿದೆ.