Share this news

ಕರ್ನೂಲ್‌ (ಆಂಧ್ರ ಪ್ರದೇಶ): ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಬಳಿ ಅಪಘಾತಕ್ಕೀಡಾಗಿ, 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ದಾರುಣ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬಸ್‌ನಲ್ಲಿದ್ದ 44 ಪ್ರಯಾಣಿಕರ ಪೈಕಿ ಕೇವಲ 12 ಮಂದಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾವೇರಿ ಟ್ರಾವೆಲ್ಸ್ ನಿರ್ವಹಿಸುತ್ತಿದ್ದ ಬಸ್ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಚಿನ್ನತೇಕೂರು ಗ್ರಾಮದ ಬಳಿ ದ್ವಿಚಕ್ರ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಅಪಘಾತದ ಪರಿಣಾಮವಾಗಿ ಬೈಕ್ ವಾಹನದ ಕೆಳಗೆ ಸಿಲುಕಿಕೊಂಡಿತು, ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಬಸ್ಸನ್ನು ವ್ಯಾಪಿಸಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಯಿತು.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದಾಗ್ಯೂ, ಪ್ರದೇಶದಲ್ಲಿ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯಾಯಿತು. ಅಪಘಾತದ ನಂತರ ಬಸ್ ಚಾಲಕ ಸೇರಿದಂತೆ ಬಸ್ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿ, ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡವು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *