ಮಹಾರಾಷ್ಟ್ರ: ಮುಂಬಯಿನ ಥಾಣೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಭೀಕರ ಸ್ಪೋಟ ಸಂಭವಿಸಿದೆ.
ಈ ಸ್ಫೋಟದಲ್ಲಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ ಸಮೀಪದ ಥಾಣೆಯ ಡೊಂಬಿವಿಲಿಯಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಮೂರು ಸ್ಫೋಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕನಿಷ್ಠ ಎಂಟು ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ಹತೋಟಿಗೆ ಪ್ರಯತ್ನಿಸುತ್ತಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.