
ನವದೆಹಲಿ, ಫೆ,21: ದೆಹಲಿಯ ಕೆಂಪು ಕೋಟೆ ಸೇರಿದಂತೆ ಹಲವು ದೇವಸ್ಥಾನಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಮಾಹಿತಿ ಇದೆಯೆಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭದ್ರತಾ ಸಂಸ್ಥೆಗಳು ಹಾಗೂ ಪೊಲೀಸರು ತೀವ್ರ ಕಟ್ಟೆಚ್ಚೆರ ವಹಿಸಿದ್ದಾರೆ.
ಗುಪ್ತಚರ ಮೂಲಗಳ ಪ್ರಕಾರ ಚಾಂದಿನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವು ಸಂಭಾವ್ಯ ಗುರಿಯಾಗಬಹುದು ಮತ್ತು ಕೆಂಪು ಕೋಟೆ ಮತ್ತು ಅದರ ಸುತ್ತಮುತ್ತಲಿನ ಪ್ರಮುಖ ಧಾರ್ಮಿಕ ಸ್ಥಳಗಳು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಹಿಟ್ ಲಿಸ್ಟ್ ನಲ್ಲಿವೆ ಎನ್ನಲಾಗಿದೆ.
ದೆಹಲಿಯ ಕೆಂಪು ಕೋಟೆಯ ಮುಂದೆ ಸ್ಫೋಟದ ಎಚ್ಚರಿಕೆ. ಚಾಂದಿನಿ ಚೌಕ್ ನಲ್ಲಿರುವ ದೇವಾಲಯವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ. ಲಷ್ಕರ್-ಎ-ತೊಯ್ಬಾ ಐಇಡಿ ದಾಳಿಗೆ ಸಂಚು ರೂಪಿಸುತ್ತಿದೆ. ಭಾರತದಲ್ಲಿ ದೊಡ್ಡ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದ್ದಾರೆ. ದೇಶದ ಪ್ರಮುಖ ದೇವಾಲಯಗಳನ್ನು ಲಷ್ಕರ್-ಎ-ತೊಯ್ಬಾ ಗುರಿಯಾಗಿಸಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

.
.
.
.
.
.
.
.
.
.
