ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರದಲ್ಲಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ.ರಾಜ್ಯಪಾಲರ ನಿರ್ಧಾರದ ಖಂಡಿಸಿ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು.
ಈ ಪ್ರಕರಣದ ವಿಚಾರಣೆ ಹೈಕೋರ್ಟ್ ವಿಚಾರಣೆಯಲ್ಲಿ ಇರುವ ಬೆನ್ನಲ್ಲೇ ಆ. 22ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆ. 22ರ ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಗಸ್ಟ್.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ
`