Share this news

 

ಕಾರ್ಕಳ,ಜ.18: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಟ್ಟೆಯ ಸುರೇಶ್ ಕೊರಗ ಪೂಜಾರಿ ಬಂಧಿತ ಆರೋಪಿ.

ಜ.16 ಬಜಗೋಳಿಯ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೀಗ ಮುರಿದು ಒಳಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕಳ್ಳತನಕ್ಕೆ ಪ್ರಯತ್ನಿಸಿದ ವ್ಯಕ್ತಿ ನಿಟ್ಟೆಯ ಸುರೇಶ್ ಕೊರಗ ಪೂಜಾರಿ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ಮೇಲೆ ಕಾರ್ಕಳ ನಗರ, ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಉಡುಪಿ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐ.ಪಿ.ಎಸ್. ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಸುಧಾಕರ್ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. , ಸಿ.ಪಿ.ಐ ಕಾರ್ಕಳ ಮಂಜಪ್ಪ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಎಂ.ಎಸ್. ಪಿಎಸ್‌ಐ ಸುಂದರ, ಎಎಸ್‌ಐ ಪ್ರಕಾಶ, ಎಎಸ್‌ಐ ಸುಂದರ ಗೌಡ, ಹೆಚ್.ಸಿ. ರುದ್ರೇಶ್, ಹೆಚ್.ಸಿ. ಚಂದ್ರಶೇಖರ್, ಪಿಸಿ ಸಂತೋಷ್, ಮಾಂತೇಶ್‌ ಮತ್ತು ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿಯಾದ ದಿನೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *