
ಕಾರ್ಕಳ,ಜ. 18:ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಮನೋತೋಷ್ ಕಾಯಲ್( 39) ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಎಸ್ ಐ ಪ್ರಸನ್ನ ಎಂ.ಎಸ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಮೊಗರು ಗ್ರಾಮದ ಮಳಲಿ ಕ್ರಾಸ್ ಎಂಬಲ್ಲಿ ಬಂಧಿಸಿದೆ.
.ಆರೋಪಿ ಮನುತೋಷ್ ಕಾಯಲ್ ಕಳ್ಳತನ ನಡೆಸುವ ಉದ್ದೇಶದಿಂದ ಹಲವಾರು ಪ್ರದೇಶಗಳಲ್ಲಿ ಸಂಚರಿಸಿ ತುಂಬಾ ದಿನಗಳಿಂದ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ. ಈತ 2023 ರಲ್ಲಿ ಮನೆಯೊಂದರ ಇನ್ವರ್ಟರ್ ಬ್ಯಾಟರಿ ಕಳವುಗೈದಿದ್ದ .
ಕಾರ್ಯಾಚರಣೆಗೆ ಪಿಎಸ್‌ಐ ಸುಂದರ, ಎಎಸ್‌ಐ ಪ್ರಕಾಶ, ಎಎಸ್‌ಐ ಸುಂದರ ಗೌಡ, ಹೆಚ್.ಸಿ. ರುದ್ರೇಶ್, ಹೆಚ್.ಸಿ. ಚಂದ್ರಶೇಖರ್, ಪಿಸಿ ಸಂತೋಷ್, ಮಾಂತೇಶ್ ಮತ್ತು ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿಯಾದ ದಿನೇಶ್ ಸಹಕರಿಸಿದರು.

.
.
.
.
