ಹೆಬ್ರಿ,ಸೆ,25: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ವೀರಪ್ಪ ಮೊಯ್ಲಿಯವರ ಶಿಷ್ಯ ಮುದ್ರಾಡಿ ಮಂಜುನಾಥ ಪೂಜಾರಿಯವರಿಗೆ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕಳೆದ 4 ದಶಕಗಳಿಂದ ಅವಿಭಜಿತ ಕಾರ್ಕಳ ತಾಲೂಕಿನಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿರುವ ಮಂಜುನಾಥ ಪೂಜಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು