Share this news

ಬೆಂಗಳೂರು ,ಅ.27: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರಕಟವಾದ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದ ಪರಿಶೀಲಿಸಿ, ಹೆಸರು ಇಲ್ಲದಿದ್ದರೆ ಏನು ಮಾಡಬೇಕು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.5 ಕೋಟಿ ಮತದಾರರಿದ್ದರು. ಆದರೆ, ವಿಳಾಸ ಅಥವಾ ಬೂತ್ ಹೊಂದಾಣಿಕೆ ಆಗದಿರುವುದು, ತಾರ್ಕಿಕ ವ್ಯತ್ಯಾಸಗಳು, ಒಂದೇ ಹೆಸರು ಎರಡು ಕಡೆ ಇರುವುದು, ಆಧಾರ್ ಅಥವಾ ವಿಳಾಸ ಹೊಂದಾಣಿಕೆ ಆಗದಿರುವುದು ಮುಂತಾದ ಕಾರಣಗಳಿಂದ ಭಾರತೀಯ ಚುನಾವಣಾ ಆಯೋಗವು 43.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ ಮಾಡಿತ್ತು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. ಸಲ್ಲಿಕೆಯಾದ ಆಕ್ಷೇಪಣೆಗಳು, ನೋಟಿಸ್‌ಗಳ ವಿಚಾರಣೆ ಮತ್ತು ವಿಲೆವಾರಿ ಪ್ರಕ್ರಿಯೆಯು ಅಕ್ಟೋಬರ್ 22ರಂದು ಪೂರ್ಣಗೊಂಡಿತು. ಸಮಗ್ರ ಪರಿಶೀಲನೆ ಪ್ರಕ್ರಿಯೆಯ ನಂತರ, ರಾಜ್ಯದಲ್ಲಿ ಅಂತಿಮವಾಗಿ 4 ಕೋಟಿ 53 ಲಕ್ಷ ಮತದಾರರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದು ಪರಿಷ್ಕೃತ ಮತ್ತು ನಿಖರವಾದ ಮತದಾರರ ಪಟ್ಟಿಯನ್ನು ಪ್ರತಿಬಿಂಬಿಸುತ್ತದೆ. ಈ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಒಟ್ಟು 8,40,000 (8.4 ಲಕ್ಷ) ಹೊಸ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲಾಗಿದೆ. ನೋಟಿಸ್ ನೀಡಲಾಗಿದ್ದ 43.82 ಲಕ್ಷ ಜನರಲ್ಲಿ, ಸೂಕ್ತ ದಾಖಲೆಗಳನ್ನು ಒದಗಿಸಲು ವಿಫಲರಾದ ಅಥವಾ ಅನರ್ಹತೆಯನ್ನು ಹೊಂದಿದ್ದ ಸುಮಾರು 50,000 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ voters.eci.gov.in ಗೆ ಭೇಟಿ ನೀಡಿ Voter Helpline ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ಪರಿಶೀಲಿಸಿ.
ಒಂದು ವೇಳೆ ನಿಮ್ಮ ಹೆಸರು ಅಂತಿಮ ಪಟ್ಟಿಯಲ್ಲಿ ಇಲ್ಲದಿದ್ದರೆ ಆತಂಕಪಡಬೇಕಾಗಿಲ್ಲ. ಭಾರತೀಯ ಚುನಾವಣಾ ಆಯೋಗವು ‘ನಿರಂತರ ನವೀಕರಣ (Continuous Updation)’ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಮೂಲಕ voters.eci.gov.in ವೆಬ್‌ಸೈಟ್‌ನಲ್ಲಿ ಫಾರ್ಮ್ 6 ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
ಆಫ್‌ಲೈನ್ ವಿಧಾನವಾದರೆ, ನಿಮ್ಮ ಪ್ರದೇಶದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅಥವಾ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಫಾರ್ಮ್ 6 ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು.
ಅಗತ್ಯ ದಾಖಲೆಗಳನ್ನು ಒದಗಿಸಿದರೆ, ಮುಂದಿನ ಪರಿಶೀಲನೆ ಪ್ರಕ್ರಿಯೆಗಳ ನಂತರ ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆ ಮಾಡಲಾಗುತ್ತದೆ. ಸೆಪ್ಟೆಂಬರ್ 23ರ ನಂತರ ಸಲ್ಲಿಕೆಯಾಗಿರುವ ಸುಮಾರು 6.4 ಲಕ್ಷ ಅರ್ಜಿಗಳನ್ನು ಮುಂದಿನ ನವೀಕರಣ ಅವಧಿಯಲ್ಲಿ ಪರಿಶೀಲಿಸಲಾಗುವುದು ಎಂದು ಆಯೋಗ ಈಗಾಗಲೇ ಸ್ಪಷ್ಟಪಡಿಸಿದೆ.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *