Share this news

ಅಹಮದಾಬಾದ್‌: ‘ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿದೆಯೇ ಹೊರತು ವಿರೋಧಿಗಳು ಆರೋಪಿಸುವಂತೆ ಕೇವಲ ಚುನಾವಣೆ ಗೆಲ್ಲಲು ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಮಂಗಳವಾರ ಸಾಬರಮತಿ ಪ್ರದೇಶದಲ್ಲಿ ಮೋದಿ ಏಕಕಾಲಕ್ಕೆ ದೇಶದ 10 ವಂದೇಭಾರತ್ ರೈಲುಗಳಿಗೆ ಚಾಲನೆ ನೀಡಿದರು ಹಾಗೂ ದೇಶದ ವಿವಿಧ ಭಾಗಗಳ 1.06 ಲಕ್ಷ ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು ‘ಕೆಲವರು ನಮ್ಮ ಕೆಲಸಗಳನ್ನು ಚುನಾವಣೆಯ ದೃಷ್ಟಿಕೋನದಲ್ಲಿ ನೋಡುತ್ತಾರೆ. ಆದರೆ ನಾನು ನಿಮಗೊಂದು ವಿಷಯ ಹೇಳಲು ಬಯಸುತ್ತೇನೆ, ನಾವು ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ದೇಶಕಟ್ಟುವ ಅಭಿಯಾನದ ಭಾಗವೇ ಹೊರತು ಕೇವಲ ಅಧಿಕಾರ ಚಲಾವಣೆಗೆ ಹಾಗೂ ಸರ್ಕಾರ ರಚನೆಗಲ್ಲ ಎಂದು ಮಾರ್ಮಿಕವಾಗಿ ನುಡಿದರು. ಹಿಂದಿನ ತಲೆಮಾರು ಅನುಭವಿಸಿದಂತೆ ಈಗಿನ ಯುವ ಸಮೂಹ ಸಮಸ್ಯೆ ಎದುರಿಸಬಾರದು ಎಂಬುದು ನಮ್ಮ ಉದ್ದೇಶ. ಅದುವೇ ಮೋದಿ ಗ್ಯಾರಂಟಿ’ ಎಂದು ಮೋದಿ ಹೇಳಿದರು

ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರ ರೈಲ್ವೆ ವಲಯದಲ್ಲಿ ಈ ಹಿಂದೆ ಮಾಡಲಾದ ವೆಚ್ಚಕ್ಕಿಂತ 6 ಪಟ್ಟು ಹೆಚ್ಚು ಹಣ ವೆಚ್ಚ ಮಾಡಿದೆ. 2024ರ ಮೊದಲ 2 ತಿಂಗಳಲ್ಲೇ ನಮ್ಮ ಸರ್ಕಾರ ಒಟ್ಟು 11 ಲಕ್ಷ ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದೆ. ಹಿಂದಿನ ಸರ್ಕಾರಗಳ ರಾಜಕೀಯ ನಿಲುವುಗಳಿಂದಾಗಿ ಸ್ವಾತಂತ್ರ್ಯಾನಂತರದಲ್ಲಿ ದೇಶದಲ್ಲಿ ರೈಲ್ವೇ ವಲಯ ಆದ್ಯತೆ ಪಡೆದುಕೊಂಡಿರಲಿಲ್ಲ. ಹಿಂದೆಲ್ಲಾ ರೈಲ್ವೆ ಸಚಿವರು ಹೊಸ ನಿಲುಗಡೆ ಘೋಷಿಸಿದಾಗ, ಬೋಗಿಗಳ ಸಂಖ್ಯೆ ಹೆಚ್ಚಿಸಿದಾಗ ಸದಸ್ಯರು ಚಪ್ಪಾಳೆ ತಟ್ಟುತ್ತಿದ್ದರು. 21ನೇ ಶತಮಾನದಲ್ಲೂ ನಾವು ಇಂಥ ಮನಸ್ಥಿತಿ ಉಳಿದುಕೊಂಡರೆ ಏನಾಗುತ್ತಿತ್ತು ಎಂದು ಪ್ರಶ್ನಿಸಿದ ಮೋದಿ, ಈ ಕಾರಣಕ್ಕಾಗಿ ನಾವು ರೈಲ್ವೇ ಬಜೆಟ್‌ ಅನ್ನು ಸಾಮಾನ್ಯ ಬಜೆಟ್‌ನಲ್ಲಿ ವಿಲೀನಗೊಳಿಸಿ ಅವುಗಳ ಯೋಜನೆಗೆ ಸದಾ ಹಣಕಾಸಿನ ನೆರವು ಸಿಗುವಂತೆ ನೋಡಿಕೊಂಡೆವು ಎಂದು ಹೇಳಿದರು. ಹಿಂದೆಲ್ಲಾ ರೈಲುಗಳ ಆಗಮನ, ನಿರ್ಗಮನ ವಿಳಂಬ ಸಾಮಾನ್ಯವಾಗಿತ್ತು, ಟಿಕೆಟ್‌ ಖರೀದಿಗೆ ದಲ್ಲಾಳಿಗಳಿಗೆ ಕಮಿಷನ್‌ ನೀಡಬೇಕಿತ್ತು. ನಿಲ್ದಾಣಗಳಲ್ಲಿ ಉದ್ದದ ಸರದಿ ನಿಲ್ಲಬೇಕಿತ್ತು, ಮುಂಗಡ ಕಾಯ್ದಿರಿಸಲು ಸಾಕಷ್ಟು ಸಮಯ ಕಾಯಬೇಕಿತ್ತು. ಇದೆಲ್ಲಾ ನನಗೆ ಚೆನ್ನಾಗಿ ಗೊತ್ತು ಏಕೆಂದರೆ ನಾನು ನನ್ನ ಜೀವನ ಆರಂಭಿಸಿದ್ದೇ ರೈಲ್ವೇ ಹಳಿಗಳ ಮೇಲೆ ಎಂದು ಮೋದಿ ಹೇಳಿದರು.

ಇದೇವೇಳೆ ಪ್ರಧಾನಿ ಮೋದಿ ಸರಕು ಕಾರಿಡಾರ್‌ನ ಕಂಟ್ರೋಲ್‌ ರೂಂ, ಪೆಟ್ರೋಕೆಮಿಕಲ್‌ ಕಾಂಪ್ಲೆಕ್ಸ್‌ಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದರು

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *