ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಸಿಲುಕಿ ಅದೆಷ್ಟೋ ಜನ ಕೋಟ್ಯಾಂತರ ರೂ. ಕಳೆದುಕೊಂಡಿದ್ದಾರೆ. ಸಾಲ ಮಾಡಿ ಕೊನೆಗೆ ಆತ್ಮಹತ್ಯೆಗೆ ಮೊರೆ ಹೋಗಿದ್ದಾರೆ.ಇದೀಗ ಈ ಆನ್ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಮಸೂದೆ ರೂಪಿಸಿದೆ. ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ದಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ.
ಹೊಸ ಮಸೂದೆ ಪ್ರಕಾರ ರಾಜ್ಯ ಸರ್ಕಾರ ಕರ್ನಾಟಕ ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ರಾಧಿಕಾರ ರಚನೆ ಮಾಡಲು ತೀರ್ಮಾನಿಸಿದೆ. ಈ ಪ್ರಾಧಿಕಾರ ಹೊಸ ಕಾನೂನಿನಂತೆ ನಿಯಮಗಳ ಜಾರಿ, ಅನುಪಾಲನೆ, ಆನ್ಲೈನ್ ಗೇಮಿಂಗ್ ಹಾಗೂ ಗ್ಯಾಂಬ್ಲಿಂಗ್ ಮೇಲೆ ನಿಯಂತ್ರಣ ಹಾಗೂ ನಿಗಾ ಇಡಲಿದೆ. ಪ್ರಾಧಿಕಾರ ದೃಢೀಕರಿಸಿದ ಕೇವಲ ಕೌಶಲ್ಯ ಆಟಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
ಈ ಪ್ರಸ್ತಾವಿತ ಕಾನೂನು ಪ್ರಕಾರ ಅದೃಷ್ಟದ ಆಟ (ಲಕ್ ಗೇಮ್) ಅಂದರೆ ಯಾವುದೇ ಆಟ, ಸ್ಪರ್ಧೆ ಅಥವಾ ಕ್ರಿಯೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ ಆನ್ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಚಟುವಟಿಕೆಗಳಿಗೆ ನಿಷೇಧವಿದೆ
ಶಿಕ್ಷ, ದಂಡ ಹೊಸ ಕಾಯ್ದೆಯಡಿ ಬೆಟ್ಟಿಂಗ್ ನಡೆಸುವವರಿಗೆ ಮೂರು ವರ್ಷ ಜೈಲುಶಿಕ್ಷೆ ಜೊತೆಗೆ 1 ಲಕ್ಷ ರೂ. ದಂಡ ವಿಧಸಲಾಗುತ್ತದೆ. ಬೆಟ್ಟಿಂಗ್ ಪ್ರೋತ್ಸಾಹಿಸುವವರಿಗೆ 6 ತಿಂಗಳ ಕಾಲ ಜೈಲುಶಿಕ್ಷೆ ಜೊತೆಗೆ 10 ಸಾವಿರ ರೂ. ವಿಧಿಸಲಾಗುತ್ತದೆ.