
ಬೆಂಗಳೂರು,ಜ.07 :ರಾಜ್ಯದ 10 ಜಿಲ್ಲೆಗಳಿಗೆ ಸಂಬAಧಿಸಿದ 12 ತಾಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಂತಾಮಣಿ, ತುಮಕೂರು ಜಿಲ್ಲೆಯ ಕೊರಟಗೆರೆ, ವಿಜಯಪುರ ಜಿಲ್ಲೆಯ ತಿಕೋಟ, ವಿಜಯಪುರ, ಕಲಬುರಗಿ ಜಿಲ್ಲೆಯ ಸೇಡಂ, ಬೀದರ್ ಜಿಲ್ಲೆಯ ಬಸವ ಕಲ್ಯಾಣ, ಯಾದಗಿರಿ ಜಿಲ್ಲೆಯ ಶಹಪುರ, ಮೈಸೂರು ಜಿಲ್ಲೆಯ ಟಿ ನರಸೀಪುರ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ,ಬೆAಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಕ್ಷೇತ್ರಗಳಲ್ಲಿನ 12 ತಾಲೂಕುಗಳ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿಗಳನ್ನು ಈ ಕೂಡಲೇ ರಾಜ್ಯ ಸರ್ಕಾರ ಹಿಂಪಡೆದಿದೆ.

.
.
