Share this news

ಕಾರ್ಕಳ,ಅ.09: ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ರಾಜ್ಯದ ಇತರ ಭಾಗಗಳಿಗೂ, ವಿಶ್ವಮಟ್ಟಕ್ಕೂ ಪರಿಚಯಿಸುವ ಉದ್ದೇಶದಿಂದ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಕೋಣಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಆಯ್ಕೆಯಲ್ಲಿ ವೇಗ, ಪಾರದರ್ಶಕತೆ ಮತ್ತು ನಿಖರತೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಕಾರ್ಕಳದ ಮಿಯ್ಯಾರು‌ ಕಂಬಳ ಕ್ರೀಡಾಂಗಣದಲ್ಲಿ ನಡೆದ ಜೂನಿಯರ್ ಕೋಣಗಳ ಆಯ್ಕೆ ಶಿಬಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಿಯ್ಯಾರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ 180 ಜೋಡಿ ಕೋಣಗಳು ಭಾಗವಹಿಸಿದ್ದು, ಒಟ್ಟು ಆರು ವಿಭಾಗಗಳಲ್ಲಿ 160 ಜೋಡಿ ಕೋಣಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ನಾಲ್ಕು ವಿಭಾಗಗಳಲ್ಲಿ 82 ಜೋಡಿ ಕೋಣಗಳ ಆಯ್ಕೆ ಪೂರ್ಣಗೊಂಡಿದ್ದು, ಉಳಿದ ಎರಡು ವಿಭಾಗಗಳ ಆಯ್ಕೆ ಪ್ರಕ್ರಿಯೆ ಮುಂದುವರಿದಿದೆ. ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಫಲಿತಾಂಶದ ಕುರಿತು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.

ಅ. 17ರಂದು ಮೈಸೂರಿಗೆ ಪ್ರಯಾಣ:
ಮೈಸೂರು ದಸರಾ ಕಂಬಳದಲ್ಲಿ ಪಾಲ್ಗೊಳ್ಳುವ ಕೋಣಗಳ ತಂಡ ಅ. 17ರಂದು ಬೆಳಗ್ಗೆ 8 ಗಂಟೆಗೆ ಪುತ್ತೂರಿನಿಂದ ಮೆರವಣಿಗೆಯ ಮೂಲಕ ಪ್ರಯಾಣ ಆರಂಭಿಸಲಿದೆ. ಮಧ್ಯಾಹ್ನ 12 ಗಂಟೆಗೆ ಕುಶಾಲನಗರ ತಲುಪಲಿದ್ದು, ಮಾರ್ಗಮಧ್ಯೆ ಸಂಪಾಜೆ, ಸುಳ್ಯ ಸೇರಿದಂತೆ ವಿವಿಧೆಡೆ ಸ್ವಾಗತಕ್ಕೆ ರೈತಾಪಿ ವರ್ಗದವರು ಸಿದ್ಧತೆ ನಡೆಸುತ್ತಿದ್ದಾರೆ. ಕುಶಾಲನಗರದಿಂದ ಸಂಜೆ 3 ಗಂಟೆಗೆ ಹೊರಟು, ಸಂಜೆ 6.30ರ ಸುಮಾರಿಗೆ ಮೈಸೂರು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದರು.

ಕಂಬಳ ಆಯೋಜನೆಗೆ ವಿರೋಧ ಸರಿಯಲ್ಲ:
ತುಳುನಾಡಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಕಂಬಳವನ್ನು ಹೊರಜಿಲ್ಲೆಗಳಲ್ಲಿ ಆಯೋಜಿಸುವುದಕ್ಕೆ ಕೆಲ ಕಂಬಳ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ದೇವಿಪ್ರಸಾದ್ ಶೆಟ್ಟಿ, ಕಂಬಳವು ಜಾತಿ, ಮತ ಹಾಗೂ ಪಕ್ಷಭೇದವಿಲ್ಲದೆ ನಡೆಯುವ ಕ್ರೀಡೆಯಾಗಿದೆ. ಇದು ತುಳುನಾಡಿನ ಸಮಸ್ತ ಜನರ ನೆಚ್ಚಿನ ಕ್ರೀಡೆಯಾಗಿದ್ದು, ಬೇರೆ ಜಿಲ್ಲೆಗಳಲ್ಲಿ ಆಯೋಜಿಸುವುದರಿಂದ ಅದರ ಸಾಂಸ್ಕೃತಿಕ ಮಹತ್ವ ಕಡಿಮೆಯಾಗುವುದಿಲ್ಲ ಎಂದರು.
ತುಳುನಾಡು ಮತ್ತು ಮೈಸೂರಿಗೆ ಅವಿನಾಭಾವ ಸಂಬಂಧವಿದೆ. ಮೈಸೂರು ದಸರಾ ಅಂತಹ ಸಾಂಸ್ಕೃತಿಕ ವೇದಿಕೆಯಲ್ಲಿ ಕಂಬಳ ಆಯೋಜಿಸುವುದರಿಂದ ತುಳುನಾಡಿನ ಆಚಾರ-ವಿಚಾರ ಮತ್ತು ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರಚಾರ ದೊರೆಯಲಿದೆ. ಅದೇ ರೀತಿ, ಹೊರಜಿಲ್ಲೆಗಳ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾಪ್ರಕಾರಗಳನ್ನು ತುಳುನಾಡಿನಲ್ಲಿ ಪರಿಚಯಿಸುವ ಪ್ರಯತ್ನಗಳೂ ನಡೆಯುತ್ತಿವೆ. ಇಂತಹ ಸಾಂಸ್ಕೃತಿಕ ವಿನಿಮಯವು ಪ್ರಾದೇಶಿಕ ಕಲಾಪ್ರಕಾರಗಳ ಪರಿಚಯಕ್ಕೆ ನೆರವಾಗಲಿದೆ ಎಂದು ಹೇಳಿದರು.
ಮೈಸೂರು ದಸರಾದಂತಹ ಸಾಂಸ್ಕೃತಿಕ ಮಹೋತ್ಸವದಲ್ಲಿ ರಾಜ್ಯ ಸರ್ಕಾರ ಕಂಬಳ ಆಯೋಜಿಸುತ್ತಿರುವುದು ತುಳುನಾಡಿನ ಜನರಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪದಾಧಿಕಾರಿಗಳಾದ ವಿಜಯಕುಮಾರ್ ಕಂಗಿನಮನೆ, ಉದಯ್ .ಎಸ್. ಕೋಟ್ಯಾನ್, ಮುಚ್ಚೂರು ಕಲ್ಕುಡೆ ಲೋಕೇಶ ಶೆಟ್ಟಿ, ಯಡ್ತೂರು ರಾಜೇಶ್ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *