ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ.
ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು ಸಂಗೋಪನೆ ಇಲಾಖೆಗೆ ಒಳಪಟ್ಟ ಪಶುಚಿಕಿತ್ಸಾಲಯಕ್ಕೆ ಸೇರಿದ 2 ಎಕರೆ ಜಾಗವನ್ನು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಗೆ ನೀಡಿ ಆದೇಶ ಹೊರಡಿಸಿತ್ತು.
ಇದೀಗ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಾಮರಾಜಪೇಟೆ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ಮಾಡಿದ ನ್ಯಾಯಾಲಯವು ಚಾಮರಾಜಪೇಟೆ ಪಶು ಆಸ್ಪತ್ರೆಯನ್ನು ವಕ್ಫ್ ಬೋರ್ಡ್‌ಗೆ ನೀಡಲಾದ ಸರ್ಕಾರಿ ಆದೇಶಕ್ಕೆ ತಡೆಯನ್ನು ನೀಡಿದೆ. ಜೊತೆಗೆ, ಚಾಮರಾಜಪೇಟೆಯ ಪಶು ಆಸ್ಪತ್ರೆ ಸ್ಥಳಾಂತರ ಮಾಡುವುದನ್ನು ಕೂಡ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುಯಂತೆ ಹೈಕೊರ್ಟ್ ಸೂಚನೆ ನೀಡಿದೆ.
ಇನ್ನು ಹೈಕೋರ್ಟ್‌ನಲ್ಲಿ ಆಸ್ಪತ್ರೆ ಭೂಮಿ ಹಸ್ತಾಂತರ ಮತ್ತು ಆಸ್ಪತ್ರೆ ಸ್ಥಳಾಂತದರ ಬಗ್ಗೆ ವಿಚಾರಣೆ ನಡೆಸಿದ ನಂತರ ಪಶು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹೊರಡಿಸಿದ್ದ ಎರಡೂ ಆದೇಶಕ್ಕೆ ತಡೆ ನೀಡಲಾಗಿದೆ. ನ್ಯಾಯಮೂರ್ತಿ ಶಿವಶಂಕರೇಗೌಡ ಹಾಗೂ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರ ಪೀಠದಿಂದ ಸರ್ಕಾರಿ ಆದೇಶಕ್ಕೆ ತಡೆ ನೀಡಿ ಆದೇಶ ನೀಡಿದೆ