Share this news

ಬೆಂಗಳೂರು, ಅ.08: ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ ರಾಜ್ಯದ 252 ಗ್ರಾಮ ಪಂಚಾಯ್ತಿಗಳಲ್ಲಿ `ನೀರಿದ್ದರೆ ನಾಳೆ’ ಯೋಜನೆಯನ್ನು ಅ.9ರಂದು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದು, ನಾಳೆ ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಇಲಾಖೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ. ನೀರಿನ ಬಳಕೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ವಸಿಷ್ಠ ಸಿಂಹ ಅವರನ್ನು ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಪ್ರಕೃತಿಯಿAದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ `ನೀರಿದ್ದರೆ ನಾಳೆ’ ಎನ್ನುವ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ನೀರಿನ ಮಹತ್ವ ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನ ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *