Share this news

ಬೆಳ್ತಂಗಡಿ, ಆ 08: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೂಳಲಾಗಿದೆ‌ ಎಂಬ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡದಂತೆ ಮಾಧ್ಯಮಗಳಿಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

‘ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ತಮ್ಮ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ, ಸಿಟಿ ಸಿವಿಲ್‌ ಕೋರ್ಟ್‌ ಹೆಚ್ಚುವರಿ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಹೈಕೋರ್ಟ್‌ ರದ್ದುಗೊಳಿಸಿತ್ತು. ಧರ್ಮಸ್ಥಳ ದೇವಾಲಯ ಸಂಸ್ಥೆಯ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಸ್ವಚ್ಛತಾ ಕಾರ್ಮಿಕನೊಬ್ಬ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ನಮ್ಮ ವಿರುದ್ಧ ಯಾವುದೇ ಆರೋಪಗಳು ಇಲ್ಲದಿದ್ದರೂ ನಮ್ಮ ಕುಟುಂಬ, ದೇವಾಲಯ ಹಾಗೂ ಸಂಸ್ಥೆಗಳ ವಿರುದ್ಧ ಆನ್‌ಲೈನ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆಗಳನ್ನು ಬಿತ್ತರಿಸಲಾಗುತ್ತಿದ್ದು ಇದನ್ನು ನಿರ್ಬಂಧಿಸಲು ಆದೇಶಿಸಬೇಕು’ ಎಂದು ಹರ್ಷೇಂದ್ರ ಕುಮಾರ್‌ ಅಸಲು ದಾವೆಯಲ್ಲಿ ಕೋರಿದ್ದರು.

ಮಧ್ಯಂತರ ಮನವಿ ಪುರಸ್ಕರಿಸಿದ್ದ ಸಿಟಿ ಸಿವಿಲ್‌ ಕೋರ್ಟ್‌ನ 10ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ವಿಜಯ ಕುಮಾರ್ ರೈ, ‘ಮುಂದಿನ ವಿಚಾರಣೆಯವರೆಗೆ ಡಿಜಿಟಲ್, ಸಾಮಾಜಿಕ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಸ್ತು–ವಿಷಯ ಪ್ರಕಟಿಸಬಾರದು ಇಲ್ಲವೇ ಹಂಚಬಾರದು’ ಎಂದು ಪ್ರತಿವಾದಿಗಳು ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಜುಲೈ 8ರಂದು ಪ್ರತಿಬಂಧಕ ಆದೇಶ ಹೊರಡಿಸಿದ್ದರು.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *