✍️ ಕೃಷ್ಣ ಎನ್, ಅಜೆಕಾರ್
ಹೆಬ್ರಿ:ಸರ್ಕಾರದ ಜನವಿರೋಧಿ ಧೊರಣೆಯ ವಿರುದ್ಧ ಸಮಾಜ ಮುಖ್ಯವಾಹಿನಿಯಲ್ಲಿದ್ದುಕೊಂಡು ಕಾನೂನು ರೀತಿಯಲ್ಲಿ ಹೋರಾಟ ನಡೆಸುವುದನ್ನು ಬಿಟ್ಟು ಸಮಾಜದ ವ್ಯವಸ್ಥೆಗೆ ವಿರುದ್ಧವಾಗಿ ಶಸ್ತಾçಸ್ತç ಹಿಡಿದು ರಕ್ತಕ್ರಾಂತಿಯ ಮೂಲಕ ಪರಿಹಾರ ಕಂಡುಕೊಳ್ಳುವ ಹಾದಿ ತುಳಿದಿದ್ದ ಹೆಬ್ರಿಯ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿಯಾಗಿದ್ದ ನಕ್ಸಲ್ ನಾಯಕ ವಿಕ್ರಮ್ ಗೌಡ ತನ್ನ ಹೋರಾಟದಲ್ಲಿ ಏನೂ ಸಾಧಿಸಲಾಗದೇ ಕೊನೆಗೂ ತಾನು ಹುಟ್ಟಿ ಬೆಳೆದ ಮಣ್ಣಲ್ಲೇ ಮಣ್ಣಾಗಿದ್ದಾನೆ. ನ.18 ರ ಸೋಮವಾರ ರಾತ್ರಿ 9.30ರ ಸುಮಾರಿಗೆ ಹೆಬ್ರಿ ತಾಲೂಕಿನ ಪೀತಬೈಲ್ ಎಂಬಲ್ಲಿನ ದಟ್ಟ ಕಾಡಿನಲ್ಲಿ ವಿಕ್ರಮ್ ಗೌಡ ಪೊಲೀಸರ ಎನ್‌ಕೌಂಟರಿಗೆ ಬಲಿಯಾಗಿದ್ದಾನೆ.ಸಮಾಜದಲ್ಲಿ ಸಜ್ಜನನಾಗಿ ಬದುಕಬೇಕಾಗಿದ್ದ 46ರ ಹರೆಯದ ವಿಕ್ರಮ್ ಗೌಡ ಯಾನೆ ಶ್ರೀಕಾಂತ್ ನಕ್ಸಲ್ ಎಂಬ ಹಣೆಪಟ್ಟಿಯೊಂದಿಗೆ ಪಂಚಭೂತಗಳಲ್ಲಿ ಲೀನವಾಗಿದ್ದಾನೆ.
ಮಣಿಪಾಲದ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಿಕ್ರಮ್ ಗೌಡನ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಕೂಡ್ಲುವಿನ ವಿಕ್ರಮ್ ಗೌಡನ ಕುಟುಂಬಸ್ಥರ ಜಮೀನಿನಲ್ಲಿ ಸಂಪ್ರಾಯದAತೆ ಆತನ ಸಹೋದರ, ಸಹೋದರಿ ಹಾಗೂ ಸಂಬAಧಿಕರು ಪೊಲೀಸ್ ಭದ್ರತೆಯಲ್ಲಿ ಶವ ಸಂಸ್ಕಾರ ನಡೆಸಿದ್ದಾರೆ.
2002-03ರ ವೇಳೆ ಪಶ್ಚಿಮ ಘಟ್ಟ ಪ್ರದೇಶವನ್ನು ಕುದುರೆಮುಖ ರಾಷ್ಟಿçÃಯ ಉದ್ಯಾನವನ ಎಂದು ಘೋಷಣೆ ಮಾಡುವ ಸರ್ಕಾರದ ನಿಲುವಿನ ವಿರುದ್ಧ ಹುಟ್ಟಿಕೊಂಡ ಹೋರಾಟ ಕೊನೆಗೆ ಸರ್ಕಾರದ ಜತೆ ಶಸ್ತಾçಸ್ತç ಸಂಘರ್ಷದ ಮೂಲಕ ನಕ್ಸಲ್ ಹುಟ್ಟಿಗೆ ಕಾರಣವಾಯಿತು.ಈ ಯೋಜನೆಯಿಂದ ಕಾಡಂಚಿನ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನವೆಂದು ಹೇಳಿ ಅರಣ್ಯ ಪ್ರದೇಶದ ಮನೆಗಳಿಗೆ ಭೇಟಿ ನೀಡುತ್ತಿದ್ದ ಕರ್ನಾಟಕ ವಿಮೋಚನಾ ರಂಗದ ಕಾರ್ಯಕರ್ತರು ವಿಕ್ರಮ್ ಗೌಡನ ಮನೆಗೂ ಬಂದಿದ್ದರು. ಅಂದು ಕೇವಲ 25ರ ಹರೆಯದ ವಿಕ್ರಮ್ ಗೆ ಹೋರಾಟದ ಹಾದಿಯಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧವಾಗಿ ಹೋರಾಟ ನಡೆಸುವುದು ಸರಿ ಅನ್ನಿಸಿ ಆತನೂ ಅವರೊಂದಿಗೆ ಸೇರಿಕೊಂಡು ಮನೆಮನೆಗೆ ಹೋಗಿ ಜನಾಭಿಪ್ರಾಯ ಮೂಡಿಸಿದ್ದ. ಈತನ ಈ ವರ್ತನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಟ್ಟಾಗಿ ಕಾನೂನಾತ್ಮಕ ಪರಿಹಾರ ಪಡೆಯಲು ಅವಕಾಶವಿದೆ ಎಂದು ಬುದ್ಧಿವಾದವನ್ನೂ ಹೇಳಿದ್ದರು.ಆದರೆ ಆತನ ಮನೆಯವರ ಪ್ರಕಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪೊಲೀಸರು ನಿರಂತರವಾಗಿ ಆತನಿಗೆ ತೊಂದರೆ ಕೊಟ್ಟಿದ್ದರ ಪರಿಣಾಮ ವ್ಯವಸ್ಥೆಯ ವಿರುದ್ಧ ಆಕ್ರೋಶಗೊಂಡು ಮನೆ ತೊರೆದಿದ್ದ ಎಂದಿದ್ದಾರೆ.
ಈ ನಡುವೆ 2005ರಲ್ಲಿ ಚಿಕ್ಕಮಗಳೂರಿನ ಮೆಣಸಿನ ಹಾಡ್ಯದಲ್ಲಿ ಎನ್‌ಕೌಂಟರ್‌ಗೆ ಬಲಿಯಾದ ಸಾಕೇತ್ ರಾಜನ್‌ನನ್ನೂ ಭೇಟಿಯಾಗಿ ಅವರ ಪ್ರಜಾ ರಾಜ್ಯದ ಚಿಂತನೆಗಳಿAದ ಪ್ರಭಾವಿತನಾದ, ಕೊನೆಗೆ ಊರಲ್ಲಿದ್ದು ಏನು ಸಾಧಿಸಲಾಗುವುದಿಲ್ಲ ಎಂದನ್ನಿಸಿದ ವಿಕ್ರಮ್, ಕಾಡು ಸೇರಿ ಬಂದೂಕು ಕೈಗೆತ್ತಿಕೊಂಡ. ಹೇಳಿಕೊಳ್ಳುವಂತಹ ಅಕ್ಷರಾಭ್ಯಾಸ ಇಲ್ಲದಿದ್ದರೂ, ಕರ್ನಾಟಕ- ಕೇರಳದ ನಕ್ಸಲರ ಮಧ್ಯೆ ತನ್ನದೇ ಪ್ರಭಾವ ಬೆಳೆಸಿಕೊಂಡಿದ್ದ.
ಸಾಕೇತ್ ರಾಜನ್ ಎನ್‌ಕೌಂಟರ್ ನಂತರ, ನೀಲಗುಳಿ ಪದ್ಮನಾಭ ಮಲೆನಾಡಿನ ನಕ್ಸಲ್ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದ, ಆತನ ಕಾಲಿಗೆ ಪೊಲೀಸರ ಗುಂಡು ಬಿದ್ದಾಗ, ಆತನ ಸ್ಥಾನಕ್ಕೆ ಬಂದಾತ ಕೃಷ್ಣಮೂರ್ತಿ, ಆತನೂ ಅನಾರೋಗ್ಯಕ್ಕೀಡಾದಾಗ, ಕೇರಳದ ಕಾಡಿನಿಂದ ಹೊರಗೆ ಬಂದು ಕರ್ನಾಟಕ ಮಲೆನಾಡಿನಲ್ಲಿ ನಕ್ಸಲ್ ಚುಕ್ಕಾಣಿ ಹಿಡಿದ ವಿಕ್ರಮ್ ಗೌಡ, ಕಳೆದ ಐದಾರು ವರ್ಷಗಳಿಂದ ಎರಡೂ ರಾಜ್ಯಗಳ ನಡುವೆ ತನ್ನ ತಂಡದೊAದಿಗೆ ಓಡಾಡುತ್ತಿದ್ದ.
ಕಸ್ತೂರಿ ರಂಗನ್ , ಹುಲಿ ಯೋಜನೆ ವಿರೋಧಿ ಹೋರಾಟಕ್ಕೆ ಬಲ ತುಂಬುವ ಯತ್ನ?:
ಕೇರಳ, ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಸ್ತೂರಿರಂಗನ್ ವರದಿ ಜಾರಿಯಾಗುವ ಕುರಿತು ದಶಕದ ಹಿಂದೆ ಪ್ರಸ್ತಾಪವಾಗಿದ್ದ ಯೋಜನೆಯನ್ನು ವಿರೋಧಿಸುವಲ್ಲಿ ವಿಕ್ರಮ್ ಗೌಡ ಕೂಡ ಮುಂಚೂಣಿಯಲ್ಲಿದ್ದ.ಕೇರಳದ ಕಾಡಂಚಿನ ಜನರೊಂದಿಗೆ ಸಭೆಗಳನ್ನು ನಡೆಸಿ ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದ.ಆದ್ದರಿಂದ ಕೇರಳ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ವಲಸೆ ಬಂದಿದ್ದ ಎನ್ನಲಾಗಿದೆ.
ಹೊಟೇಲ್ ಕಾರ್ಮಿಕನಾಗಿ ಹೋರಾಟ ಹಾದಿಯಲ್ಲಿ ದಿಕ್ಕುತಪ್ಪಿ ಬಂದೂಕು ಹಿಡಿದು ಜೀವತೆತ್ತ!
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಅರಣ್ಯಪ್ರದೇಶದ ಮನೆಯಲ್ಲಿ ಹುಟ್ಟಿ ಬೆಳೆದ ವಿಕ್ರಮ್ ಗೌಡ ಓದಿದ್ದು ಕೇವಲ 4ನೇ ತರಗತಿ, ಕುಟುಂಬದ ಕಡುಬಡತನದಿಂದಾಗಿ ಬದುಕು ಕಟ್ಟಿಕೊಳ್ಳಲು ದೂರದ ಮುಂಬಯಿಗೆ ಹೋಟೇಲ್ ಕಾರ್ಮಿಕನಾಗಿ ಸೇರಿಕೊಂಡಿದ್ದ, ಆದರೆ ಅಲ್ಲಿ ಹೊಟೇಲ್ ಕ್ಲೀನರ್ ಕೆಲಸ ಒಗ್ಗದೇ ಊರು ಸೇರಿದ್ದ, ಬಳಿಕ ತನ್ನೂರಿನ ಸಮೀಪದ ಹೆಬ್ರಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ, ಈ ನಡುವೆ 2003ರಲ್ಲಿ ಕುದುರೆಮುಖ ರಾಷ್ಟಿçÃಯ ಉದ್ಯಾನವನ ವಿರೋಧಿ ಹೋರಾಟಕ್ಕೆ 24ರ ಬಿಸಿರಕ್ತದ ಯುವಕ ವಿಕ್ರಮ್ ಗೌಡ ಧುಮಕಿದ್ದ. ಸಮಾಜದ ವ್ಯವಸ್ಥೆಗೆ ವಿರುದ್ಧವಾದ ಸಂಘಟನೆಯ ಮೂಲಕ ಅಧಿಕಾರ ಸ್ಥಾಪಿಸುವ ಹುಸಿನಂಬಿಕೆಯಿAದ ಅಡವಿ ಸೇರಿದ್ದ ವಿಕ್ರಮ್ ಗೌಡನ 20 ವರ್ಷಗಳ ಹೋರಾಟ ಈ ಕೇವಲ ಕರಾಳ ಇತಿಹಾಸ.ಈ ಎಲ್ಲಾ ಹೋರಾಟದ ಫಲವಾಗಿ ಆತ ಏನೂ ಸಾಧಿಸಲಾಗದೇ ಬೀದಿ ಹೆಣವಾದ, ಮಾತ್ರವಲ್ಲದೇ ಈ ರೀತಿಯ ಹೋರಾಟದಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಮತ್ತೆ ಸಾಬೀತಾಗಿದೆ.
ಶರಣಾಗತಿಗೂ ಸಿದ್ಧವಾಗಿತ್ತೇ ವೇದಿಕೆ?
ಎರಡು ದಶಕಗಳಿಂದ ಕೇರಳ ಹಾಗೂ ಕರ್ನಾಟಕ ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ನಕ್ಸಲ್ ವಿಕ್ರಮ್ ಗೌಡ ನೇತೃತ್ವದ ಆರು ಮಂದಿ ಶಂಕಿತ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನುವ ಮಾಹಿತಿಯೂ ಈ ಹಿಂದೆ ಹರಿದಾಡಿತ್ತು.ಅಲ್ಲದೇ ನಕ್ಸಲರ ಶರಣಾಗತಿ ಸುದ್ಧಿ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮತ್ತೆ ಶಾಂತಿ ಸ್ಥಾಪನೆಯಾಗುವ ಹೊಸ ಭರವಸೆ ಮೂಡಿಸಿತ್ತು.
ಕೇರಳದಲ್ಲಿ ಸಕ್ರಿಯವಾಗಿದ್ದ ವಿಕ್ರಮ್ ಗೌಡ ನೇತೃತ್ವದ ತಂಡದ ಸದಸ್ಯರಾದ ವನಜಾಕ್ಷಿ, ಮುಂಡಗಾರು ಲತಾ, ಜಾನ್ ಯಾನೆ ಜಯಣ್ಣ,ಸುಂದರಿ, ಕೋಟೆಹೊಂಡ ರವೀಂದ್ರ ಎಂಬವರ ಶರಣಾಗತಿಗೆ ಮಾತುಕತೆ ನಡೆದಿತ್ತೆನ್ನಲಾಗಿತ್ತು. ಈ ತಂಡದ ಇನ್ನೋರ್ವ ಸದಸ್ಯ ಅಂಗಡಿ ಸುರೇಶ್ ಈಗಾಗಲೇ ಬಂಧಿತನಾಗಿದ್ದು ಜೈಲಿನಲ್ಲಿದ್ದಾನೆ. ಪ್ರಮುಖವಾಗಿ ಕರ್ನಾಟಕದಲ್ಲಿ ನಕ್ಸಲ್ ಗುಂಪುಗಳಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಅರಣ್ಯ ವ್ಯಾಪ್ತಿಯಲ್ಲಿನ ನಿವಾಸಿಗಳ ಬೆಂಬಲವಿಲ್ಲದ ಕಾರಣದಿಂದ ಈ ಗುಂಪು ಶರಣಾಗತಿಗೆ ಮುಂದಾಗಿದೆ ಎನ್ನಲಾಗಿತ್ತು.
ಒಟ್ಟಿನಲ್ಲಿ ಕಳೆದ 20 ವರ್ಷಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬಂದೂಕಿನ ಮೂಲಕ ಪೊಲೀಸರ ಜತೆಗಿನ ಸಂಘರ್ಷದಲ್ಲಿ ಕೊನೆಗೂ ಹೋರಾಟದಲ್ಲೇ ಮಣ್ಣಾಗಿ ಹೋಗಿದ್ದು ಮಾತ್ರ ವಿಪರ್ಯಾಸವೇ ಸರಿ.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.