Share this news

ಬೆಂಗಳೂರು:ಬಿಜೆಪಿ ವಿರುದ್ಧ ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಮುಂದಿನ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಆದೇಶಿಸಿದೆ.

ತನ್ನ ಪುತ್ರ ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವ ಕಾರಣಕ್ಕಾಗಿ ಕೆರಳಿದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿದ್ದರು‌. ತನ್ನ ಮಗನಿಗೆ ಟಿಕೆಟ್ ಕೈತಪ್ಪಲು ಯಡಿಯೂರಪ್ಪನವರೇ ಕಾರಣವೆಂದು ಕೆಂಡಕಾರಿದ್ದ ಈಶ್ವರಪ್ಪ ರಾಘವೇಂದ್ರ ಸ್ಪರ್ಧಿಸುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ತಾನೇ ಕಣಕ್ಕಿಳಿಯುವುದಾಗಿ ಘೋಷಿಸಿ ತೀವ್ರ ಕುತೂಹಲ ಮೂಡಿಸಿದ್ದರು.ಇದಾದ ಬಳಿಕ ಅವರನ್ನು ಮನವೊಲಿಸಲು ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಿಸಿದರೂ ಹಠ ಬಿಡದ ಈಶ್ವರಪ್ಪ ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಗುಡುಗಿದ್ದರು. ಇದಲ್ಲದೇ ನಾಮಪತ್ರ ಹಿಂಪಡೆಯದೇ ಸ್ಪರ್ಧಾ ಕಣದಲ್ಲಿ ಉಳಿದ ಕಾರಣದಿಂದ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಂದಿನ 6 ವರ್ಷಗಳ ಕಾಲ ಉಚ್ಚಾಟಿಸಿದೆ.

 

 

 

 

 

 

 

 

 

Leave a Reply

Your email address will not be published. Required fields are marked *