Share this news

ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆಎನ್ ರಾಜಣ್ಣ ವಜಾಗೊಂಡ ಬಳಿಕ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಒಂದು ದೊಡ್ಡ ಷಡ್ಯಂತ್ರ, ಪಿತೂರಿ ಇದೆ. ಯಾರ‍್ಯಾರು ಏನೇನು ಮಾಡಿದ್ದಾರೆ ಎಂದು ಕಾಲ ಬಂದಾಗ ನಾನು ಎಲ್ಲವನ್ನೂ ಹೇಳುತ್ತೇನೆ, ದೆಹಲಿಗೆ ಹೋಗಿ ಪಕ್ಷದ ವರಿಷ್ಠರನ್ನ ಭೇಟಿ ಮಾಡುತ್ತೇನೆ. ಇದು ಪಕ್ಷದ ತೀರ್ಮಾನ ಆಗಿದ್ದರಿಂದ ಪ್ರಶ್ನಿಸುವಂತಿಲ್ಲ. ಪಕ್ಷದ ವರಿಷ್ಠರಿಗೆ ತಪ್ಪು ಗ್ರಹಿಕೆ ಆಗಿದೆ ಎಂಬ ಮಾಹಿತಿ ಇದೆ. ಹಿರಿಯ ಸಚಿವರು, ಶಾಸಕರ ಜೊತೆ ದೆಹಲಿಗೆ ಹೋಗುತ್ತೇನೆ. ಪಕ್ಷದ ವರಿಷ್ಠರಿಗೆ ಆಗಿರುವ ತಪ್ಪು ಗ್ರಹಿಕೆ ಸರಿಪಡಿಸುತ್ತೇನೆ. ವರಿಷ್ಠರ ಮಾರ್ಗದರ್ಶನದಂತೆ ಮುಂದುವರಿಯುತ್ತೇನೆ ಎಂದರು.

ಮಾಜಿ ಸಚಿವ ಎಂದು ಕರೆಸಿಕೊಳ್ಳಲು ಸಂತಸವಾಗುತ್ತಿದೆ. ಅವಕಾಶ ನೀಡಿದ ಮುಖ್ಯಮಂತ್ರಿಗಳಿಗೆ ಎಲ್ಲ ಸಚಿವರ ಜೊತೆ ಸೇರಿ ಧನ್ಯವಾದ ಹೇಳಿ ಬಂದಿದ್ದೇನೆ. ಎಲ್ಲ ಸಚಿವರು, ಶಾಸಕರು ನನಗೆ ಸಹಾಯ ಮಾಡಿದ್ದಾರೆ.ಸಂಪುಟದಿಂದ ಕೈಬಿಡುವುದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷದ ತೀರ್ಮಾನವಾಗಿರುವುದರಿಂದ ನಾನು ಪ್ರಶ್ನೆ ಮಾಡಲ್ಲ. ರಾಹುಲ್ ಗಾಂಧಿ, ವೇಣುಗೋಪಾಲ್​ಗೆ ತಪ್ಪು ಗ್ರಹಿಕೆಯಾಗಿದೆ. ಆ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇವೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಮ್ಮ ನಾಯಕರು. ನಾವು ಎಲ್ಲಿ ಏನೇ ಮಾತನಾಡಿದರೂ ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದರು.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *