ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ ವೇಳೆ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಕುರಿತು ಚಿಂತನೆ ನಡೆಸುವುದಾಗಿ ಹೇಳಿದ್ದರು.
ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದರು.
ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ನಿನ್ನೆ ನಡೆದ ಸಂವಾದದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ವಿಷಯ ಹೇಳಿದ್ದಾರೆ. ಈ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದಾಗ ಕೇಳುತ್ತೇನೆ.ಆದರೆ ಪುರುಷರಿಗೆ ಉಚಿತ ಪ್ರಯಾಣದ ಬಗ್ಗೆ ಯಾವ ಪ್ರಸ್ತಾವನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದರು.