ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣ ಆರೋಪ ಬಂದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ತೀವೃ ಒತ್ತಡ ಬಂದಿತ್ತು. ಕಾಂಗ್ರೆಸ್ ನಲ್ಲೇ ಮುಂದಿನ ಸಿಎಂ ಬಗ್ಗೆ ರಾಜಕೀಯ ಬೆಳವಣಿಗೆಗಳು ಜೋರಾಗಿದ್ದವು. ಮುಂದಿನ ಸಿಎಂ ತಾವೇ ಎಂದು ಹಿರಿಯ ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡಲು ಶುರು ಮಾಡಿದ್ದರು. ಆದರೆ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಇದೀಗ ಬೈ ಎಲೆಕ್ಷನ್ ನಲ್ಲಿ ಸಿಎಂ ವಿಚಾರ ಸದ್ದು ಮಾಡಲಾರಂಭಿದ್ದು, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಉಪ ಚುನಾವಣೆ ಇದು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿರುವ ಶಾಸಕ ಶಿವಲಿಂಗೇಗೌಡ, ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗುವ ಉಪ ಚುನಾವಣೆ ಇದು. ಉಪಚುನಾವಣೆ ಫಲಿತಾಂಶ ಡಿ.ಕೆ.ಶಿವಕುಮಾರ್ ನಾಯಕತ್ವ ತೋರಿಸುತ್ತೆ. ನೀವು ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ ತಿರುವು ಚನ್ನಪಟ್ಟಣ ಕ್ಷೇತ್ರದಿಂದ ಶುರುವಾಗುತ್ತೆ ಎಂದು ಹೇಳಿದ್ದಾರೆ.
ಉಪಚುನಾವಣೆ ಘೋಷಣೆಯಾದ ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಕಣವಾಗಿದೆ. ಕ್ಷೇತ್ರದಲ್ಲಿನ ಸೋಲು ಗೆಲುವಿನ ಆಧಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಬದಲಾವಣೆ ನಿರೀಕ್ಷಿಸಬಹುದಾಗಿದೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕರು ಒಕ್ಕಲಿಗ ಮತ ಸೆಳೆಯಲೂ ಭರ್ಜರಿ ಪ್ಲಾನ್ ಮಾಡಿಕೊಂಡಿದAತಿದೆ. ಡಿಕೆಶಿ ಮುಂದಿನ ಸಿಎಂ ಅಂದರೆ ಒಕ್ಕಲಿಗರು ಸಿಪಿ ಯೋಗೇಶ್ವರ್ ಮತ ನೀಡಿ ಗೆಲ್ಲಿಸಲಿದ್ದಾರೆ ಎನ್ನುವ ಪ್ಲಾನ್ ಕಾಂಗ್ರೆಸ್ ನಾಯಕರದ್ದಾಗಿ. ಹೀಗಾಗಿ ಡಿಕೆಶಿ ಸಿಎಂ ಅಸ್ತ್ರವನ್ನು ಪ್ರಯೋಗಿಸಲಾಗುತ್ತಿದೆ.