ಬೆಂಗಳೂರು: ಈ ಸಾಲಿನ ಶೈಕ್ಷಣಿಕ ವರ್ಷದ SSLC ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು,ರಾಜ್ಯದಲ್ಲಿ ಶೇ 66.14 ಫಲಿತಾಂಶ ದಾಖಲಾಗಿದೆ.
ಪ್ರತೀ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ(ಶೇ.91.12) ಪಡದರೆ,ಉಡುಪಿ ಜಿಲ್ಲೆ(ಶೇ.89.96) ದ್ವಿತೀಯ ಸ್ಥಾನ ಪಡೆದರೆ, ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ 83.19) ದೊರೆತಿದ್ದರೆ, ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ (ಶೇ 82.29) ಹಾಗೂ ಕೊಡಗು ಜಿಲ್ಲೆಗೆ 5ನೇ ಸ್ಥಾನ (ಶೇ 82.21) ದೊರೆತಿದೆ. ಕಲಬುರಗಿ ಜಿಲ್ಲೆ (ಶೇ. 42.43%) ಕೊನೆಯ ಸ್ಥಾನದಲ್ಲಿದೆ.
ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ 240 ಮೌಲ್ಯಮಾಪನ ಕೇಂದ್ರಗಳಲ್ಲಿ 65,000 ಮೌಲ್ಯಮಾಪಕರಿಂದ ನಡೆದಿತ್ತು.2024-25ರ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 62.14% ಫಲಿತಾಂಶ ಬಂದಿದೆ ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ.