Share this news

ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇಂದು ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು. ಅದೇ ದಿನ ಸಂಜೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಆಮೇಲೆ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಸುಲೇಮಾನ್ ನನ್ನು ನಿನ್ನೆ ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಹತ್ತೆಯಾದ ಇನ್ನಿಬ್ಬರು ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು. ಇವರೆಲ್ಲರೂ ಪಾಕ್ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾಗೆ ಸೇರಿದ ಪ್ರಮುಖ ಭಯೋತ್ಪಾದಕರು. ಪಹಲ್ಗಾಮ್ ದಾಳಿಯಲ್ಲಿ ಇವರದ್ದೇ ಕೈವಾಡವಿತ್ತು. 26 ಜನರನ್ನು ಕೊಂದವರನ್ನು ಹತ್ಯೆ ಮಾಡಲಾಗಿದೆ ಎಂದು ಅಮಿತ್ ಶಾ ಸದನಕ್ಕೆ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *