
ಬೆಂಗಳೂರು,ಏ.14 :ರಣ ಬಿಸಿಲಿನಿಂದ ವಾತಾವರಣದ ತಾಪಮಾನ ವಿಪರೀತ ಏರಿಕೆಯಾಗಿದ್ದು, ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರದಲ್ಲಿ ಉಂಟಾಗುವ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮತ್ತು ಮೈಸೂರು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

















.
.
.
.
.
.
.
.
.
.
