ಬೆಂಗಳೂರು ಆ.06 : ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು, ಇದು ತೀವ್ರ ಕುತೂಹಲಕ್ಕೆ ಎಡೆಮಾಡಿದೆ. ಈ ಭೇಟಿಯಿಂದ ಸಿಎಂ ಸಿದ್ದುಗೆ ಪ್ರಾಸಿಕ್ಯೂಶನ್ ಭೀತಿ ಎದುರಾಗಿದೆ
ಟಿಜೆ ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟೀಸ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಾಸ್ಸಾದ ಬೆನ್ನಲ್ಲೇ ಸಾಮಾಜಿ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಇನ್ನೂ ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿದೆ. ಆದರೆ ರಾಜ್ಯಪಾಲರು ಸಂಪುಟದ ನಿರ್ಣಯವನ್ನು ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಸಿಎಂ ಸಿದ್ಧರಾಮಯ್ಯನವರಿಗೆ ಕಂಟಕ ಎದುರಾಗಲಿದೆ
`