Share this news

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು ಮಾಡುತ್ತಿದ್ದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.

ಮನಮೋಹನ್ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾಳೆ ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

 

 

Leave a Reply

Your email address will not be published. Required fields are marked *