Share this news

 

ಕಾರ್ಕಳ: ಉದ್ಯಮಿ, ಹಿಂದೂ ಮುಖಂಡ‌ ಹಾಗೂ ಸಮಾಜ ಸೇವಕ ಮಹೇಶ್ ಶೆಟ್ಟಿ ಕುಡುಪುಲಾಜೆಯವರ ಐವತ್ತನೇ ವರ್ಷದ ಹುಟ್ಟು ಹಬ್ಬದ ಸುವರ್ಣ ಮಹೋತ್ಸವ ಕಾರ್ಯಕ್ರಮವು ನಾಳೆ ಏ.27ರಂದು ಸಂಜೆ 5.30ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಸುಬ್ರಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ಎಂ,ಆರ್,ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,ಮುಂಬಯಿ ಪೊಲೀಸ್ ಅಧಿಕಾರಿ ದಯಾನಾಯಕ್, ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ್ ಕಾಮತ್ ಹಿರಿಯ ವಕೀಲ ಎಂ ಕೆ ವಿಜಯ್ ಕುಮಾರ್ ಮುಂತಾದವರು ಉಪಸ್ಥಿತರಿರಲಿದ್ದಾರೆ

 

 

 

 

 

 

 

 

 

Leave a Reply

Your email address will not be published. Required fields are marked *